ಬೆಂಗಳೂರು.29.ಮೇ.25:- ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು (Special Action Force) ಸ್ಥಾಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ (1)ರ ಆದೇಶದಲ್ಲಿ, ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ.
ಮೇಲೆ ಓದಲಾದ (2)ರ ಪತ್ರದಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ ವಿಶಿಷ್ಟ ಭಾಷೆಗಳು ಮತ್ತು ಅದರ ಸಾಂಸ್ಕೃತಿಕ ಪರಂಪರೆಯಿಂದ ಗುರುತನ್ನು ರೂಪಿಸಿದ್ದು, ಜನರಲ್ಲಿ ಆಳವಾದ ಸಮುದಾಯದ ಪ್ರಜ್ಞೆ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಸಾಂಪ್ರದಾಯಿಕವಾಗಿ ಉನ್ನತ ಮಟ್ಟದ ಶಿಕ್ಷಣ ಮತ್ತು ಸಾಕ್ಷರತೆಯೊಂದಿಗೆ ಸ್ಥಿರವಾದ ಆರ್ಥಿಕ ಪ್ರಗತಿಯನ್ನು ಕಂಡಿದ್ದು, ಇದರ ಹೊರತಾಗಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಹ ಪ್ರಮುಖ ಕಾನೂನು ಮತ್ತು ಸುವ್ಯವಸ್ಥೆಯ ಸವಾಲುಗಳಾಗಿ ತ್ವರಿತವಾಗಿ ಉಲ್ಬಣಗೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತವೆಂದು ಹಾಗೂ ಈ ಪ್ರದೇಶವು ಕೋಮು ಹತ್ಯೆಗಳು, ದ್ವೇಷ ಭಾಷಣ, ಹಿಂಸಾಚಾರ ಮುಂತಾದ ಪುನರಾವರ್ತಿತ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಕೃತ್ಯಗಳು ದಕ್ಷಿಣ ಕನ್ನಡ ಪ್ರದೇಶವನ್ನು ಕೋಮು ಮತ್ತು ಆಡಳಿತಾತ್ಮಕ ದೃಷ್ಟಿಕೋನದಿಂದ ಹೆಚ್ಚು ಸೂಕ್ಷ್ಮವಾಗಿಸುತ್ತಿದ್ದು ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಸ್ಥಗಿತಗೊಳಿಸುತ್ತಿರುವುದರಿಂದ ಶಾಂತಿ, ಸಾಮಾಜಿಕ ಒಗ್ಗಟ್ಟು ಮತ್ತು ಕಾನೂನಿನ ನಿಯಮವನ್ನು ತರುವ ನಿಟ್ಟಿನಲ್ಲಿ ಪೂರ್ವಭಾವಿ ಮತ್ತು ನಿರಂತರ ಪ್ರಯತ್ನಗಳು ಅತ್ಯಗತ್ಯವಾಗಿರುತ್ತವೆಂದು ತಿಳಿಸಿರುತ್ತಾರೆ.
ಅಲ್ಲದೇ, ಮಾನ್ಯ ಸರ್ವೋಚ್ಚ ನ್ಯಾಯಾಲಯವು ವಿವಿಧ ಪ್ರಕರಣಗಳಲ್ಲಿನ ತೀರ್ಪುಗಳಲ್ಲಿ ನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣಗಳು, ಹಿಂಸಾಚಾರ ಮುಂತಾದ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿ, ಹಲವಾರು ಮಾರ್ಗಸೂಚಿಗಳನ್ನು ಒದಗಿಸಿರುತ್ತದೆಂದು ಸಹ ತಿಳಿಸಿರುತ್ತಾರೆ.
ಮುಂದುವರೆದು, ಸರ್ಕಾರದ ಆದೇಶ ದಿನಾಂಕ: 21/05/2005ರನ್ನಯ ಸೃಜಿಸಲಾಗಿರುವ Anti Naxal Force (ANF)ರಲ್ಲಿ ಪ್ರಸ್ತುತ ದಿನಾಂಕ: 12/05/2025ರಂತೆ ಇರುವ ಅಧಿಕಾರಿ/ಸಿಬ್ಬಂದಿಗಳ ಮಂಜೂರಾತಿ ಬಲ, ಕಾರ್ಯನಿರ್ವಹಣೆಯ ಬಲ ಮತ್ತು ಖಾಲಿ ಹುದ್ದೆಗಳ ಬಲವನ್ನು ಕೆಳಕಂಡಂತೆ ಒದಗಿಸಿರುತ್ತಾರೆ.
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…