ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 : ಸಮೀಕ್ಷಾ ಕಾರ್ಯಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.02.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಉಲ್ಲೇಖ (2) ರ ಸಭೆಯಲ್ಲಿ ವಿನಂತಿಸಿರುತ್ತಾರೆ ಹಾಗೂ ಉಲ್ಲೇಖಿತ ಪತ್ರಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕಾಗಿ ಕೋರಿರುತ್ತಾರೆ.

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗುವಂತೆ ಈ ಕೆಳಕಂಡ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

1) ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – ದಿನಾಂಕ: 02-06-2025 ರಿಂದ ದಿನಾಂಕ: 08-06-2025 ರವರೆಗೆ ವಿಸ್ತರಿಸಿದೆ.

2) ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 08-06-2025 ರವರೆಗೆ ಮುಂದುವರೆಯಲಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

27 minutes ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

50 minutes ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

1 hour ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

2 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

3 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

4 hours ago