ಬೆಂಗಳೂರು.07.ಏಪ್ರಿಲ್.25:- ರಾಜ್ಯದಲ್ಲಿ ಪೌರ ಕಾರ್ಮಿಕರಿಗೆ ಮೇ 1 ಕಾರ್ಮಿಕ ದಿನಾಚರಣೆಯಂದು ದಿನದಂತೆ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಇಂದು ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕುರಿತ ವಿವರ ಇಲ್ಲಿದೆ.
ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿಳಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದು ಹೇಳಿದರು.
ವಾಹನ ಚಾಲಕರಿಗೂ ಕಾಯಂ
ಪೌರ ಕಾರ್ಮಿಕರ ಜತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದು ತಿಳಿಸಿದರು.
ನಗದು ರಹಿತ ಆರೋಗ್ಯ ಕಾರ್ಡ್
ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.
ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು
ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ.
ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು. ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದು ತಿಳಿಸಿದರು.
ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು.
ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಪಿಎಂ
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…