Home » ಲೈವ್ ನ್ಯೂಸ್ » ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

Facebook
X
WhatsApp
Telegram

ಬೆಂಗಳೂರು.26.ಜೂನ್.25:- ರಾಜ್ಯದ ಹಲವು ತಾಲೂಕಾ ಹಾಗೂ ಜಿಲ್ಲೆಗಳಲ್ಲಿ ಭಾರಿ ಮಳೆ ಬರುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಇದಕ್ಕೆ ರಾಜ್ಯಾದ  ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ್ಯಂತ್ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ 4 -5  ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ಹಾಗೂ ನಂತರದನಂತರದ ಎರಡು ದಿನಕ್ಕೆ ಯೆಲ್ಲೋ ಅಲರ್ಟ್ ನೀಡಲಾ ಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ.

ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಹಾಸನ, ಆಲೂರು, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ವಿಸ್ತರಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎರಡು ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology