Home » ಲೈವ್ ನ್ಯೂಸ್ » ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ.

ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ.

Facebook
X
WhatsApp
Telegram

ಬೆಂಗಳೂರು.07.ಜನವರಿ.26:ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್‌ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗೂ ಸುಳ್ಳು ದಾಖಲೆಗಳನ್ನು ತಡೆಯಲಾಗುತ್ತದೆ. ಇದು ಭವಿಷ್ಯದಲ್ಲಿ ಕೂತಲ್ಲೇ ಗ್ರಾಮೀಣ ಭಾಗದ ಭೂಮಿ ಮಾಲೀಕರು ದಾಖಲೆಗಳ ಖಚಿತ ಮಾಹಿತಿ ಪಡೆಯಬಹುದು. ಭೂಮಿ ಮಾರಾಟ ವೇಳೆ ಉಂಟಾಗುವ ಸಂಭವನೀಯ ತೊಂದರೆ ತಪ್ಪಲಿದೆ.

ರಾಜ್ಯದಲ್ಲಿ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಮಾಡುವ ‘ಭೂ ಸುರಕ್ಷಾ ಯೋಜನೆ’ ಭಾಗವಾಗಿ ಬೆಂಗಳೂರು ನಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯಕ್ಕೆ ಕಂದಾಯ ಸಚಿವರು ಚಾಲನೆ ನೀಡಿದರು. ಇದೇ ಯೋಜನೆಯಡಿ ಕಳೆದ ವರ್ಷ ಜನವರಿಯಲ್ಲಿ ತಾಲೂಕು ವ್ಯಾಪ್ತಿಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಸುಮಾರು 100 ಕೋಟಿ ದಾಖಲೆಯ ಪುಟಗಳು ಡಿಜಿಟಲ್ ಸ್ವರೂಪ ಪಡೆಯಲಿವೆ.

100 ಕೋಟಿ ಪುಟಗಳು ಸ್ಕ್ಯಾನಿಂಗ್, ಡಿಜಿಟಲ್
ಒಟ್ಟು ಸುಮಾರು 150 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 100 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 70 ತಾಲೂಕುಗಳಲ್ಲಿ ಗಣಕೀಕರಣ ರ್ಪೂಗೊಂಡಿದೆ. ಇನ್ನೂ 100 ಕೋಟಿ ದಾಖಲೆಗಳ ಪುಟದಲ್ಲಿ 62 ಲಕ್ಷದಷ್ಟು ದಾಖಲೆಗಳು ಸ್ಕ್ಯಾನಿಂಗ್ ಮಾಡಿ ಡಿಜಿಟಲೀಕರಣಗೊಂಡಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology