ಬೆಂಗಳೂರು.10.ಫೆ.25:- ರಾಜ್ಯದಲ್ಲಿ ಸಾರಿಗೆ ಬಸ್ ದರ ಏರಿಕೆ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ದರ ಕೂಡ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಗುಡುಗಿರುವ ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ, ‘ಗ್ಯಾರಂಟಿ ಸರ್ಕಾರವೇ ದರ ಏರಿಕೆಯ ಗ್ಯಾರಂಟಿ ನೀಡುತ್ತಿದೆಯಾ? 50 ರೂ. ಬಸ್ ಟಿಕೆಟ್ ಭಾರವಾದರೆ, 150ರಿಂದ 300 ರೂ.
ರಾಜ್ಯದಲ್ಲಿ ಮೆಟ್ರೋ ಪಾಸ್ ಹೇಗೆ ನ್ಯಾಯಸಂಗತ? ಮೆಟ್ರೋ ದರಕ್ಕೆ ಶೇ.5ರಷ್ಟು ಏರಿಕೆ ಮಾಡಿರುವುದು ನೇರ ಜನದ್ರೋಹ’ ಎಂದು ಕಿಡಿಕಾರಿದ್ದಾರ ದಿನಲ್ಲಿ ದೇಶದ ಎಲ್ಲಾ ಮೆಟ್ರೋಗಳ ಪೈಕಿ ಬೆಂಗಳೂರು ಮೆಟ್ರೋ ದರವೇ ಅತಿ ಅಧಿಕವಾಗಿದ್ದು, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಮುಖಮಾಡುವ ಅನಿವಾರ್ಯ ಎದುರಾಗುತ್ತಿದೆ.
ದಿನಗೂಲಿ ನೌಕರರು, ವಿದ್ಯಾರ್ಥಿಗಳು, ಮಧ್ಯಮವರ್ಗದವರ ಸಂಚಾರ ಹಕ್ಕನ್ನು ಹರಣ ಮಾಡುವ ಈ ದಬ್ಬಾಳಿಕೆಯನ್ನು ತಕ್ಷಣ ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ಸಲ್ಲಿಸಲಾಗಿದ್ದ ದರ ಹೆಚ್ಚಳ ಪ್ರಸ್ತಾವನೆಯನ್ನು ಅನುಮೋದಿಸಿರುವ ರಾಜ್ಯ ಸರ್ಕಾರ, ಪ್ರಯಾಣಿಕರ ಟಿಕೆಟ್ ದರದಲ್ಲಿ ಶೇ.50ರಷ್ಟು ಏರಿಕೆ ಮಾಡಿದೆ. ಬಸ್ ದರ ಏರಿಕೆ ಬೆನ್ನಲ್ಲೇ ಬಿಎಂಆರ್ಸಿಎಲ್ ದರವೂ ಹೆಚ್ಚಳವಾಗಿರುವುದು ಸದ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…