ಗದಗ.27.ಜನವರಿ.25: ಮೈಕ್ರೊ ಫೈನಾನ್ಸ್ ಕಿರುಕುಳ ಜನರಿಗೇ ರಾಜ್ಯ ಸರ್ಕಾರ ಹೊಸ ನಿಯಮಾವಳಿಗೆ ಚಿಂತನೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ.
ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಿಸಲು ಕಾನೂನು ಕರಡು ಪ್ರತಿಯನ್ನು ಅನುಭವಿ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ.
ಕಾನೂನು ಜಾರಿಯಾದ ಮೇಲೆ ಇದರಲ್ಲಿ ಶಕ್ತಿ ಇಲ್ಲ ಎನ್ನುವಂತಾಗಬಾರದು. ಇದಕ್ಕಾಗಿ ಕಂದಾಯ ಅಧಿಕಾರಿ, ಪೊಲೀಸ್ ಅಧಿಕಾರಿಗಳಿಗೆ ಕರಡು ಪ್ರತಿ ನೀಡಲಾಗಿದ್ದು, 3-4 ದಿನಗಳಲ್ಲಿ ಕಾನೂನು ಸ್ವರೂಪ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಜನವರಿ 30ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಕರಡು ಪ್ರತಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಅಷ್ಟರೊಳಗೆ ಗೃಹ ಸಚಿವರು, ಕಂದಾಯ ಸಚಿವರು, ಉಪಮುಖ್ಯಮಂತ್ರಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ಮುಖ್ಯಮಂತ್ರಿಗಳಿಗೆ ಪ್ರತಿ ಸಲ್ಲಿಸಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಹೊಸ ನಿಯಮಾವಳಿಗೆ ಚಿಂತನೆ ನಡೆಸಿ ಮೈಕ್ರೊ ಫೈನಾನ್ಸ್ ಹಾವಳಿ ತಪ್ಪಿಸಲು ಹೊಸ ನಿಯಮಾವಳಿಗೆ ಚಿಂತನೆ
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…