ಬೆಂಗಳೂರು.29.ಮಾರ್ಚ್.25:- ರಾಜ್ಯದಲ್ಲಿ ತನ್ನ ಕ್ಯಾಂಪಸ್ ಬ್ರಿಟನ್ನಿನ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟ ಆರಂಭಿಸಲು ಆಸಕ್ತಿ ಹೊಂದಿರುವ ಉನ್ನತ ಮಟ್ಟದ ನಿಯೋಗವು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿತು.
ವಿದೇಶಿ ವಿಶ್ವವಿದ್ಯಾಲಯಗಳು ಸಹಭಾಗಿತ್ವದ ಮೂಲಕ ಅಥವಾ ಸ್ವತಂತ್ರವಾಗಿಯೇ ರಾಜ್ಯದಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬರುತ್ತಿರುವುದು ಸ್ವಾಗತಾರ್ಹ.
ಇದಕ್ಕೆ ಅಗತ್ಯವಾದ ಜಮೀನು ಮತ್ತಿತರ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ. ಯುಜಿಸಿ ನಿಯಮಾವಳಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಮೊದಲ 500 ಸ್ಥಾನದಲ್ಲಿರುವ ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ ಎಲ್ಲಿ ಬೇಕಾದರೂ ತಮ್ಮ ಕ್ಯಾಂಪಸ್ ತೆರೆಯಲು ಅವಕಾಶವಿದೆ’ ಎಂದು ಸಚಿವರು ನಿಯೋಗಕ್ಕೆ ತಿಳಿಸಿದರು.
ದಾಬಸ್‌ಪೇಟೆ-ದೊಡ್ಡಬಳ್ಳಾಪುರ ನಡುವೆ ಅಸ್ತಿತ್ವಕ್ಕೆ ಬರುವ ‘ಕ್ವಿನ್ ಸಿಟಿ’ಯಲ್ಲಿ ದೇಶ-ವಿದೇಶಗಳ ಅಗ್ರಮಾನ್ಯ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಕುಲಾಧಿಪತಿ (ಜಾಗತಿಕ ವಿಭಾಗ) ಪ್ರೊ.ಬಾಬಿ ಮೆಹತಾ, ‘ಸಹಭಾಗಿತ್ವದ ಮೂಲಕ ರಾಜ್ಯದಲ್ಲಿ ತಮ್ಮ ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ಥಾಪಿಸಬೇಕೆಂಬುದು ತಮ್ಮ ಆಸಕ್ತಿಯಾಗಿದೆ. ಕ್ವಿನ್ ಸಿಟಿ ಪ್ರದೇಶಕ್ಕೂ ಭೇಟಿ ನೀಡಲಾಗುವುದು’ ಎಂದರು.
ಐಎಸ್‌ಡಿಸಿ ನಿರ್ದೇಶಕ ಸುಬಿ ಕುರಿಯನ್, ಸಹಭಾಗಿತ್ವ ಮುಖ್ಯಸ್ಥ ಶೋನ್ ಬಾಬು, ವ್ಯವಸ್ಥಾಪಕ ಗಗನ್ ಒಬೆರಾಯ್, ಯುಎಸ್‌ಡಿಸಿ ಹಿರಿಯ ಉಪಾಧ್ಯಕ್ಷ ವಿವೇಕ್ ಭಟ್ಟಾಚಾರ್ಯ, ಜತಿನ್ ಖಂಡೇಲ್ವಾಲ್ ನಿಯೋಗದಲ್ಲಿದ್ದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…