ಬೆಂಗಳೂರು.14.ಫೆ.25:- ಇಂದು ರಾಜ್ಯದ ಹೊಸ ವಿವಿಧ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಉಪ್ ಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ ಅವರು ತಿಳಿಸಿದರು.
ರಾಜ್ಯದ ರಾಜಧಾನಿ ಬೆಂಗಳೂರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿವಿಗೆ ಕೇವಲ 2 ಕೋಟಿ ಹಣ ಮೀಸಲಿಟ್ಟಿದ್ದರು.
ಯಾವುದೇ ಜಮೀನು ನೀಡಿರಲಿಲ್ಲ. ಮಂಡ್ಯ, ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿವಿಗೆ ಮೊದಲ ಆದ್ಯತೆ ನೀಡಿದ ಪರಿಣಾಮ ಇತರೇ ವಿವಿಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು.ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು.
ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು. ಈ ಬಗ್ಗೆ ನಾವು ಚರ್ಚೆ ಮಾಡಿ, ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ.
ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಲು ಆಗಿಲ್ಲ. ಮಾಹಿತಿ ನೀಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಇಡುತ್ತೇವೆ. ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
ಅಗತ್ಯಬಿದ್ದರೆ ಈ ವಿವಿಗಳನ್ನು ಮುಚ್ಚಿಸುತ್ತೀರಾ ಎದು ಕೇಳಿದಾಗ, ನಿಮ್ಮ ಮಾತಿಗೆ ನಾನು ಕುಣಿಯಲು ಆಗುವುದಿಲ್ಲ. ನಿಮ್ಮ ಪ್ರಯತ್ನದಿಂದ ನನ್ನ ಬಾಯಲ್ಲಿ ಕೆಲವು ವಿಚಾರ ಬರುವುದಿಲ್ಲ.
ಬೇರೆಯವರನ್ನು ನಿಭಾಯಿಸುವಂತೆ ನನ್ನನ್ನು ನಿಭಾಯಿಸಲು ಪ್ರಯತ್ನಿಸಬೇಡಿ. ರಾಜ್ಯ, ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ.
ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ. ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ. ಪ್ರಾದ್ಯಾಪಕರು ಮಂಡ್ಯ, ಚಾಮರಾಜನಗರಕ್ಕೆ ಹೋಗಲು ತಯಾರಿಲ್ಲ. ಅವರು ತಮ್ಮ ಹಿರಿತನ ಹಾಗೂ ಪಿಂಚಣಿ ವ್ಯವಸ್ಥೆ ಗಮನದಲ್ಲಿಟ್ಟಕೊಂಡು ಹಿಂಜರಿಯುತ್ತಿದ್ದಾರೆ.
ಈ ವಿಚಾರವಾಗಿ ಬಂದಿರುವ ಸಲಹೆಗಳನ್ನು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ ಎಂದರು.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…