23/08/2025 1:31 AM

Translate Language

Home » ಲೈವ್ ನ್ಯೂಸ್ » ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ

Facebook
X
WhatsApp
Telegram

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ಪ್ರಾರಂಭಿಸಿದ್ದೇವೆ.

ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸವು, ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ.

ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 122 ನೇ ಸೆಪ್ಟೆಂಬರ್ ನಿಂದ 7 ಅಕ್ಟೋಬರ್ 2025) ನಡೆಸಲು ಗುರಿಯಾಗಿಟ್ಟುಕೊಳ್ಳಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುತ್ತವೆ.

ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ರಿ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ಪ್ರಕ್ರಿಯೆ ಅಭಿನಂದನೀಯವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ ‘ಆಪ್’ ಅನ್ನು ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಇದು ದೇಶದಲ್ಲಿಯೇ ಮೊದಲನೆಯ ಪ್ರಯತ್ನವಾಗಿದೆ. ಈ ಪ್ರಕ್ರಿಯೆ 23 ಆಗಸ್ಟ್ 2025 ರಿಂದ ಪ್ರಾರಂಭವಾಗುತ್ತಿದ್ದು, ‘ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ನಮಗೆ ಸಹಾಯ ಮಾಡುತ್ತದೆ.

ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ESCOM ಗಳ ಅಪಾರ ಸಂಖ್ಯೆಯ ‘ಮೀಟರ್ ರೀಡರ್‌’ (Meter Readers) ಗಳನ್ನು ಒಳಗೊಂಡಿರುತ್ತದೆ [ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣ ಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯ] ಎಸ್ಕಾಂಗಳ ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲ್ಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ

ಒಳಪಡಿಸುತ್ತಾರೆ. ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವ‌ರ್ಗಗಳಲ್ಲಿ ಅಪ್‌ ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಮತ್ತು ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ

ಒಳಪಡಿಸುತ್ತಾರೆ. ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವಗ್ರಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಮತ್ತು ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ (Unique Number) ಸಂಖ್ಯೆಯನ್ನು ನೀಡಲಾಗುತ್ತದೆ. ಅಪಾರ್ಟಮೆಂಟ್‌ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ)

ತಮ್ಮ ‘ಬಿಲ್ಲಿಂಗ್ ಸೈಕಲ್‌’ನಲ್ಲಿ ಮೀಟ‌ರ್ ರೀಡರ್ ಗಳು ಆಗಸ್ಟ್ 23, 2025 ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ.

ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ‘ದತ್ತಾಂಶಗಳನ್ನು ಸೆರೆಹಿಡಿಯುವುದು’ ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ.

ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಅಗತ್ಯತೆಯಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ನಾವು ಮನವಿ ಮಾಡುತ್ತೇವೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD