Home » ಲೈವ್ ನ್ಯೂಸ್ » ರಾಜ್ಯದಲ್ಲಿ 3000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ!

ರಾಜ್ಯದಲ್ಲಿ 3000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ!

ಯಲಬುರ್ಗಾ, 31.ಆಗಸ್ಟ್.26: ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶೀಘ್ರದಲ್ಲೇ 3,000 ಸಹಾಯಕ ಪ್ರಾಧ್ಯಾಪಕರ (Assistant Professors) ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಶೀಘ್ರದಲ್ಲೇ

ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಹಾಗೂ ವಿಶ್ವಿದ್ಯಾಲಯಗಳಲ್ಲಿ ಮೂರು ಸಾವಿರ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಆರಂಭವಾಗಲಿದೆ ಹಾಗೂ 320 ಪ್ರಾಚಾರ್ಯರಿಗೆ ಬಡ್ತಿ ನೀಡಲಾಗುತ್ತದೆ ಎಂದು ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ನಕಲಿ ಪಿಎಚ್.ಡಿ. ಪಡೆದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆ ತರಲಾಗುತ್ತದೆ ಎಂದು ಭರವಸೆ ನೀಡಿದರು.

ಉನ್ನತ ಶಿಕ್ಷಣ ಇಲಾಖೆಯು ಈ ಕುರಿತು ಗಂಭೀರ ಚಿಂತನೆ ನಡೆಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಮುಖಾಂಶಗಳು:ಹುದ್ದೆಗಳ ವಿವರ: ಸುಮಾರು 3,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ.

ವಿಶ್ವವಿದ್ಯಾಲಯಗಳ ಸ್ಥಿತಿ: ಪ್ರಸ್ತುತ ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಶೇಕಡಾ 69 ರಷ್ಟು ಬೋಧಕ ಹುದ್ದೆಗಳು ಖಾಲಿ ಇವೆ. ಈ ಕೊರತೆಯನ್ನು ನೀಗಿಸಲು ಹಂತ ಹಂತವಾಗಿ ನೇಮಕಾತಿ ಮಾಡಲು ಸರ್ಕಾರ ಮುಂದಾಗಿದೆ.

ನಿಮ್ಮಗೆ ವಿಶೇಷ ಮಾಹಿತಿಗಾಗಿ:

ಅರ್ಹತಾ ಪರೀಕ್ಷೆ (KSET): ನೇಮಕಾತಿ ಪ್ರಕ್ರಿಯೆಗೆ ಪೂರಕವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈಗಾಗಲೇ ಕೆ-ಸೆಟ್ (KSET-2026) ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ್ದು, ಸೆಪ್ಟೆಂಬರ್ 5, 2026 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ (Notification) ಪ್ರಕಟವಾದ ತಕ್ಷಣ ಅರ್ಹತೆಗಳು, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ವಿವರಗಳು ಲಭ್ಯವಾಗಲಿವೆ.

Author

ಪ್ರಮುಖ ಸುದ್ದಿ

Stock market

Astrology