ಬೆಂಗಳೂರು.19.ಸೆಪ್ಟೆಂಬರ್.26: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಆದಷ್ಟು ಬೇಗ ನೇಮಕಾತಿ ಮಾಡಲಾಗುವುದು ಅಂದು ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲ ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನ. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ಯೂನಿವರ್ಸಿಟಿಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿರೋದು ವಿದ್ಯಾರ್ಥಿಗಳ ಕಲಿಕೆ ಕುಂಠಿತವಾಗಿರುವ ಜೊತೆಗೆ, ಹಲವು ಸಮಸ್ಯೆಗಳಿಗೆ ಕಾರಣವಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ, ಕೇಂದ್ರ ವಿಶ್ವವಿಧ್ಯಾಲಯ ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವು ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಿಕೊಡುವ ಪ್ರಾಧ್ಯಾಪಕರು ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಅತಿಥಿ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ದೊರೆತಿದೆ. ರಾಜ್ಯದಲ್ಲಿ ಸರಿಸುಮಾರು 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ ಇರುವ ಪರಿಣಾಮ, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಶೀಘ್ರ ಪ್ರಾಧ್ಯಾಪಕರ ನೇಮಕಾತಿಗೆ ಒತ್ತಾಯ
ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆದರೆ ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿ ಪೂರೈಸದ ಸರ್ಕಾರದ ನಡೆ ವಿದ್ಯಾರ್ಥಿಗಳ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಆದಷ್ಟು ಬೇಗ ಪ್ರಾಧ್ಯಾಪಕರ ನೇಮಕಾತಿ ಮಾಡುವಂತೆ ಒತ್ತಾಯ ಕೇಳಿಬಂದಿದೆ.
ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭರವಸೆ
ಈ ನಡುವೆ ರಾಜ್ಯದ ವಿವಿಗಳಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭೇಟಿ ನೀಡಿ, ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ ರಾಜ್ಯದ 410 ಪ್ರಥಮ ದರ್ಜೆ ಕಾಲೇಜುಗಳಿಗೆ ಖಾಯಂ ಪ್ರಾಂಶುಪಾಲರು ಇರಲಿಲ್ಲ. ಹೀಗಾಗಿ ಇನ್ನೊಂದು ವಾರದಲ್ಲಿ 320 ಕಾಲೇಜಿಗೆ ಪ್ರಾಂಶುಪಾಲರ ನೇಮಕ ಮಾಡಲು ಇಲಾಖೆ ಮುಂದಾಗಿದೆ. 1 ಸಾವಿರ ಪ್ರೊಫೆಸರ್ಗಳನ್ನು ವಿಶ್ವವಿದ್ಯಾಲಯಕ್ಕೆ, 2 ಸಾವಿರ ಪ್ರಾಧ್ಯಾಪಕರನ್ನು ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಹಣಕಾಸು ಇಲಾಖೆಯೂ ಒಪ್ಪಿಗೆ ನೀಡಿದ್ದು, ಆದಷ್ಟು ಬೇಗ ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.





Any questions related to ರಾಜ್ಯದಲ್ಲಿ 3000 ಸಾವಿರ ಸಹಾಯಕ ಪ್ರಾಧ್ಯಾಪಕರ ನೇಮಕ್ಕೆ ಸಿದ್ಧತೆ!?