ರಾಜ್ಯದಲ್ಲಿ 4,200 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಬಂದ್: ಎಐಡಿಎಸ್‌ಓ(AIDSO) ಪ್ರತಿಭಟನೆ.!

ಹಾಸನ,31.ಜನವರಿ.25:- ಕರ್ಣಾಟಕ ರಾಜ್ಯದಲ್ಲಿ ರಾಜ್ಯ ಸರ್ಕಾರದ 4200ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನು ಮುಚ್ಚಲು ಹೊರಟಿರುವ ನಡೆಯನ್ನು ವಿರೋಧಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗುರುವಾರ ನಗರದ ಹೇಮಾವತಿ ಪ್ರತಿಮೆ ಎದುರು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸಂಘಟನೆಯ ಕಾರ್ಯಕರ್ತೆ ಸುಷ್ಮಾ ಮಾತನಾಡಿ, ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆ ಮಾಡುವುದಾಗಿ ಸರ್ಕಾರ ತಿಳಿಸಿದೆ. ಈ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಬಡ ವಿದ್ಯಾರ್ಥಿಗಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 4 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಎಐಡಿಎಸ್‌ಒ ಉಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರವೂ ಇದೇ ನೆಪವೊಡ್ಡಿ ಎನ್‌ಇಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ, 35 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸುವ ಮೂಲಕ ಶಾಲೆಗಳನ್ನು ರಕ್ಷಿಸಿದ್ದರು ಎಂದು ತಿಳಿಸಿದರು.

ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತ, ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣದ ಹಕ್ಕು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದೆಂದರೆ, ನೆಗಡಿ ಬಂದರೆ ಮೂಗು ಕತ್ತರಿಸಿದಂತೆ. ಸರ್ಕಾರ ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರ ಕೈಬಿಡಬೇಕು. ಹಾಜರಾತಿ ಕಡಿಮೆಯಿರುವ ಶಾಲೆಗಳಿಗೆ ಕೂಡಲೇ ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಇಂತಹ ಆದೇಶದ ವಿರುದ್ಧ ಪ್ರಬಲ ಪ್ರತಿರೋಧ ಚಳವಳಿ ಬೆಳೆಸಬೇಕು. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆ ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸಹ ಸಂಚಾಲಕಿ ಚೈತ್ರಾ, ರಾಜ್ಯ ಸಮಿತಿಯ ಕಾರ್ಯದರ್ಶಿ ಮಂಡಳಿ ಸದಸ್ಯ ನಿತಿನ್, ಜಿಲ್ಲಾ ಕಾರ್ಯಕರ್ತರಾದ ಪುರುಷೋತ್ತಮ್, ಮಮತಾ, ಶ್ಯಾಮಲಾ, ಮೋಹನ್, ರಾಹುಲ್, ನವೀನ್, ವೀರೇಶ್, ನಾಗಶ್ರೀ ಹಾಗೂ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಜ್ಯಾದ ವಿವಿಧ ಭಾಗಗಳಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮುಚ್ಚುಹೋಗಿದೆ. ಬಡ ಕುಟುಂಬಗಳಿಗೆ ಖಾಸಗಿ ಶಾಲೆಗಳಲಿ ಶಾಲಿ ಫೀಸ್ ತುಂಬಲು ಆಗೋದಿಲ್ಲ. ಬಡ್ ಕುಟುಂಬ ಮಕ್ಕಳು ಶಾಲಿ ಬಿಟ್ಟ್ ಹಕ್ತಿದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

6 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

6 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

6 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

6 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

6 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago