ಬೆಂಗಳೂರು.30.ಡಿಸೆಂಬರ್.25: ರಾಜ್ಯದಲ್ಲಿ 5 ಹೊಸ ರೈಲು ಮಾರ್ಗ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಅದರಲಿ ಪ್ರಥಮವಾಗಿ ತುಮಕೂರು ದಾವಣಗೆರೆ ರೈಲು ಮಾರ್ಗ ಸೇರಿ ಕರ್ನಾಟಕದ 5 ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಪ್ರಾಥಮಿಕ ಆದಿತ್ಯ ಕೊಡಲಾಗಿದೆ. ನಿಗದಿತ ದಿನಾಂಕದೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಇತ್ತೀಚೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ” ರಾಜ್ಯದಲ್ಲಿಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಬೇಕಾಗಿರುವ ಭೂಮಿಯನ್ನು ಆದ್ಯತೆ ಮೇರೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಶೇಕಡಾ 84 ರಷ್ಟು ಭೂಮಿ ಸ್ವಾಧೀನ
ರಾಜ್ಯದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇದೆ. ಈ ಪೈಕಿ ಶೇಕಡಾ 84 ರಷ್ಟು ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ನೂ 2,685 ಎಕರೆಗಳಷ್ಟು ಅಗತ್ಯವಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ತಿಳಿಸಿದ್ದಾರೆ.
ಯಾವೆಲ್ಲಾ ಹೊಸ ರೈಲು ಮಾರ್ಗ?
ಕುಡಚಿ – ಬಾಗಲಕೋಟೆ
ತುಮಕೂರು – ದಾವಣಗೆರೆ
ಬೇಲೂರು – ಹಾಸನ
ಶಿವಮೊಗ್ಗ – ರಾಣೆಬೆನ್ನೂರು
ಧಾರವಾಡ – ಬೆಳಗಾವಿ
5 ರೈಲು ಮಾರ್ಗದಿಂದ 12 ಜಿಲ್ಲೆಗಳಿಗೆ ಅನುಕೂಲ?
ಈ ಹೊಸ 5 ರೈಲು ಮಾರ್ಗದಿಂದ ಬಾಗಲಕೋಟೆ, ಬೆಳಗಾವಿ, ತುಮಕೂರು ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಸೇರಿ 12 ಜಿಲ್ಲೆಗಳಿಗೆ ಅನುಕೂಲವಾಗಲಿದೆ. (ಸಕಲೇಶಪುರ – ಸುಬ್ರಮಣ್ಯ ರಸ್ತೆ ಮಾರ್ಗ ವಿದ್ಯುದೀಕರಣ)
ಭೂಪರಿಹಾರ ವಿತರಣೆಗೆ ಸೂಚನೆ
ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ನಾನಾ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ತ್ವರಿತವಾಗಿ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಸಿಎಂ ಸೂಚಿಸಿದರು.
ಬಾಕಿಯಿರುವ 19 ಕ್ಷೇತ್ರಗಳಿಂದಲೂ ಪ್ರಸ್ತಾವನೆ
ಪ್ರಸಕ್ತ 2025 – 26 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 8666.50 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಅದರಂತೆ 205 ವಿಧಾನಸಭಾ ಕ್ಷೇತ್ರಗಳಿಂದ ಪ್ರಸ್ತಾವ ಸಲ್ಲಿಕೆಯಾಗಿದ್ದು, ಬಾಕಿಯಿರುವ 19 ಕ್ಷೇತ್ರಗಳಿಂದಲೂ ಪ್ರಸ್ತಾವನೆ ಪಡೆದು ನಂತರ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
”ಎಲ್ಲ ಟೆಂಡರ್ ಪ್ರಕ್ರಿಯೆಗಳನ್ನು ಜನವರಿ 10 ರೊಳಗೆ ಪೂರ್ಣಗೊಳಿಸುವಂತೆ ಗಡುವು ನೀಡುವ ಮೂಲಕ ಪ್ರಸಕ್ತ ವರ್ಷದಲ್ಲೇ ಕಾಮಗಾರಿ ಆರಂಭಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಗುಣಮಟ್ಟದಲ್ಲಿ ರಾಜಿಯಾಗುವಂತಿಲ್ಲ
”ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಅನುದಾನ ಬಳಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿ. ಕಾಮಗಾರಿಗಳ ಗುಣಮಟ್ಟದಲ್ಲಿಯಾವುದೇ ರಾಜಿ ಆಗಬಾರದು. ಜಿಲ್ಲಾಉಸ್ತುವಾರಿ ಸಚಿವರು ಎಲ್ಲಾಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಬೇಕು,” ಎಂದು ಸೂಚಿಸಿದರು.






Any questions related to ರಾಜ್ಯದಲ್ಲಿ 5 ಹೊಸ ರೈಲು ಮಾರ್ಗಗಳ ಕಾಮಗಾರಿಗೆ ವೇಗ?