ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.23.ಮೇ.25:- ರಾಜ್ಯದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ  ಶುಭ ಸುಧಿ  51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು, ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ – ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪುಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

prajaprabhat

Recent Posts

ಇಂದು ಸಚಿವ ಸಂಪುಟ ಸಭೆಯಲ್ಲಿ 18 ವಿಧೇಯಕಗಳಿಗೆ ಒಪ್ಪಿಗೆ.

ಬೆಂಗಳೂರು.07.ಆಗಸ್ಟ್.25:- ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಸಚಿವ ಸಂಪುಟ ⅔ಸಭೆಯ ನಂತರ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ…

5 minutes ago

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ‘ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ’ಗೆ ಕ್ರಮ

ಬೆಂಗಳೂರು.07.ಆಗಸ್ಟ್.25:- ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ…

1 hour ago

ಪ್ರಬುದ್ಧ ಭಾರತ ನಿರ್ಮಾಣ ಈ ದೇಶದ ಯುವಶಕ್ತಿಯಿಂದ ಮಾತ್ರ ಸಾಧ್ಯ- ರಾಜೇಗೌಡ

ಹನೂರು.07.ಆಗಸ್ಟ್.25:- ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ, ಇ ಎಲ್ ಸಿ,…

1 hour ago

ಪರಿಶಿಷ್ಟ ಜಾತಿ ಸಮುದಾಯಕ್ಕೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…

3 hours ago

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

5 hours ago

ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…

6 hours ago