|

ರಾಜ್ಯದಲ್ಲಿ SEP ಜಾರಿ : ಸರ್ಕಾರದಿಂದ ಭರ್ಜರಿ ಸಿದ್ಧತೆ.!

ಬೆಂಗಳೂರು.19.ಮೇ.25:- ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ.NEP (ಎನ್‌ಇಪಿ)ಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಗತ್ಯ ವ್ಯವಸ್ಥೆಗಳನ್ನು ಮಾಡಿದ ನಂತರ, ಎನ್‌ಇಪಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು. “ಈ ವರ್ಷ ಅದು ಅಲ್ಲ

ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಎಸ್‌ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್‌ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ.

ಇದೀಗ ಇಂಗ್ಲೀಷ್‌ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Similar Posts

Leave a Reply

Your email address will not be published. Required fields are marked *