ಬೆಂಗಳೂರು.19.ಮೇ.25:- ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ.NEP (ಎನ್‌ಇಪಿ)ಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಗತ್ಯ ವ್ಯವಸ್ಥೆಗಳನ್ನು ಮಾಡಿದ ನಂತರ, ಎನ್‌ಇಪಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು. “ಈ ವರ್ಷ ಅದು ಅಲ್ಲ
ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಎಸ್‌ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್‌ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ.
ಇದೀಗ ಇಂಗ್ಲೀಷ್‌ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…