ರಾಜ್ಯದಿಂದ ಕಾಶಿ ಯಾತ್ರೆಗೆ ಹೋಗಿಬರುವ  ಸರ್ಕಾರದಿಂದ ₹5,000 ಸಹಾಯಧನ; ಇಂದಿನಿಂದ ಅರ್ಜಿ ಆಹ್ವಾನ!

ಬೆಂಗಳೂರು.16.ಜುಲೈ.25:- ಈಗಾಗಲೇ ಯಾತ್ರೆಗೆ ಹೋಗಿಬಂದವರು, ಇನ್ನುಮುಂದೆ ಹೋಗಿ ಬಂದಲ್ಲಿ ಅವರು ಈ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ ಲಗತ್ತಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದರೆ ಸಹಾಯಧನವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ. ಕರ್ನಾಟಕದಿಂದ ಕಾಶಿ ಯಾತ್ರೆಗೆ ಹೋಗಿಬಂದ 30 ಸಾವಿರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಸಾವಿರ ರೂ. ಸಹಾಯಧನ ನೀಡುವುದಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30000 ಯಾತ್ರಾರ್ಥಿಗಳಿಗೆ ತಲಾ ರೂ.5000/-ಗಳಂತೆ ಸರ್ಕಾರದ ಸಹಾಯಧನವನ್ನು ವಿತರಿಸುವ ಕುರಿತು ಇಂದಿನಿಂದಲೇ (ಜು.15ರಿಂದ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಅಧಿಕೃತವಾಗಿ ಪ್ರಕಟಣೆಯನ್ನೂ ನೀಡಲಾಗಿದೆ. ಆದರೆ, ಕಾಶಿ ಯಾತ್ರೆಗೆ ಹೋಗಿಬಂದ ಬಗ್ಗೆ ಅಧಿಕೃತವಾದ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದೆ.

ಕಾಶಿ ಯಾತ್ರೆ ಸಹಾಯಧನ ಪಡೆಯಲು ಅರ್ಹತೆಗಳು:

ಕಾಶಿ ಯಾತ್ರೆಗೆ ಹೋಗಿಬಂದ ಯಾತ್ರಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಯಾತ್ರಾರ್ಥಿಗಳು ತಮ್ಮ ಆಧಾರ್ ಕಾರ್ಡನ ಎರಡೂ ಕಡೆ (both sides) ತಪ್ಪದೇ ಅಪ್‌ಲೋಡ್ ಮಾಡತಕ್ಕದ್ದು.
ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್ ಸಲ್ಲಿಕೆ ಮಾಡಬೇಕು.
ಯಾತ್ರಾರ್ಥಿಗಳು ಕಾಶಿಗೆ ಪ್ರಯಾಣಿಸಿದ ಕುರಿತು ಟಿಕೆಟ್ ಅಪ್‌ಲೋಡ್ ಮಾಡತಕ್ಕದ್ದು.
ಅರ್ಹ ಯಾತ್ರಾರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸೇವಾ ಸಿಂಧು ವೆಬ್ ಪೋರ್ಟಲ್ (https://sevasindhuservices. karnataka.gov.in) ನಲ್ಲಿ ದಿನಾಂಕ ಜುಲೈ 15ರಿಂದ ನವೆಂಬರ್ 15ರ ಸಂಜೆ 04:00 ಗಂಟೆಯೊಳಗೆ ಸಲ್ಲಿಸಬೇಕಾಗಿರುತ್ತದೆ.
ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ. ಈ ಬಗ್ಗೆ ಯಾತ್ರಾರ್ಥಿಗಳು 100 ರೂ.ಗಳ ಛಾಪಾ ಕಾಗದ (E-Stamp Paper)ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್‌ಲೋಡ್ ಮಾಡತಕ್ಕದ್ದು.

ಕಾಶಿಯಾತ್ರೆ ಕೈಗೊಂಡಿರುವುದನ್ನು ದೃಢೀಕರಿಸುವ ಸಲುವಾಗಿ ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಚಿತ್ರ (Photo)/GPS location ಹೊಂದಿರುವ ಛಾಯಾಚಿತ್ರನ್ನು ಮೊಬೈಲ್‌ನಲ್ಲಿ ತೆಗೆದು ಆಪ್‌ ಲೋಡ್ ಮಾಡತಕ್ಕದ್ದು.

ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು, ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರತಕ್ಕದ್ದು. (ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಅನ್ನು ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು) ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಇನ್ನು ಹೆಚ್ಚಿನ ಮಾಹಿತಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಅಧಿಕೃತ ವೆಬ್‌ ಸೈಟ್  ನಲ್ಲಿ ಪಡೆದುಕೊಳ್ಳಬಹುದಾಗhttps://itms.kar.nic.inಿದೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಿಂದ ಬರುವ ಅನುದಾನವನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ಭಕ್ತರಿಗಾಗಿ ಹಾಗೂ ದೇವಾಲಯ ಜೀರರ್ಣೋದ್ಧಾರ ಕಾರ್ಯಗಳಿಗಾಗಿ ಬಳಕೆ ಮಾಡುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಯಾತ್ರೆಗಳಿಗೆ ಸಹಾಯಧನವನ್ನು ನೀಡಲು ಸರ್ಕಾರ ಆಗಿಂದಾಗ್ಗೆ ಅರ್ಜಿ ಆಹ್ವಾನಿಸುತ್ತದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

57 minutes ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

1 hour ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

2 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

2 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

3 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

13 hours ago