09/06/2025 10:40 AM

Translate Language

Home » ಲೈವ್ ನ್ಯೂಸ್ » ವಿಶ್ವವಿದ್ಯಾಲಯ ಕುಲಪತಿಗಳಾಗಿ ಖಾಸಗಿ ಕಾಲೇಜು ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ನೇಮಕ.!

ವಿಶ್ವವಿದ್ಯಾಲಯ ಕುಲಪತಿಗಳಾಗಿ ಖಾಸಗಿ ಕಾಲೇಜು ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ನೇಮಕ.!

Facebook
X
WhatsApp
Telegram

ಬೆಂಗಳೂರು.02.ಮಾರ್ಚ.25:- ರಾಜ್ಯದ್ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನಗಳ ವಿಶ್ವವಿದ್ಯಾಲಯ ಕುಲಪತಿ ಹುದ್ದೆೆ ಖಾಸಗಿ ಕಾಲೇಜಿನ ಪ್ರಾಂಶುಪಾಲರ ಭಾಗ್ಯ.

ಕರ್ನಾಟಕ ರಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಆರೋಗ್ಯ ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕುಲಪತಿಯನ್ನಾಗಿ ನೇಮಕ ಮಾಡಿದಂತಾಗಿದೆ.

ಈ ಹಿಂದೆ, ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಅಥವಾ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನು ಮಾತ್ರ ನೇಮಿಸಲಾಗುತ್ತಿತ್ತು. ಆದರೆ, ಈ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರಿಗೆ ಈ ಅವಕಾಶ ದೊರೆತಿದೆ.

ಕುಲಪತಿ ಆಯ್ಕೆ ಸಂಬಂಧ ರಚಿಸಲಾಗಿದ್ದ ಪ್ರೊ. ಎಂ. ರಾಮಚಂದ್ರಗೌಡ ಅಧ್ಯಕ್ಷತೆಯ ಶೋಧನಾ ಸಮಿತಿಯು ಡಾ. ಭಗವಾನ್ ಬಿ.ಸಿ. ಅವರ ಹೆಸರನ್ನು ಶಿಫಾರಸು ಮಾಡಿತ್ತು. ಈ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!