ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ವಿಶ್ವ ಜಲದಿನ-2025′ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಡ್ಡಾಯ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು.26.ಮಾರ್ಚ್.25:- ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿ ಸರ್ಕಾರಿ  ಮಹಾವಿದ್ಯಾಲಯಗಳಲ್ಲಿ ವಿಶ್ವ ಜಲದಿನ-2025 ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇವರ ವತಿಯಿಂದ ದಿನಾಂಕ: 21.03.2025 ರಂದು “ಕಾವೇರಿ ಆರತಿ” ಎಂಬ ಬೃಹತ್ ಕಾರ್ಯಕ್ರಮದಲ್ಲಿ “ವಿಶ್ವ ಜಲದಿನ-2025” ರ ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿರುತ್ತದೆ.

ಈ ಪ್ರತಿಜ್ಞಾವಿಧಿ ಕಾರ್ಯಕ್ರಮವು ದಿನಾಂಕ: 21.03.2025 ರಿಂದ 28.03.2025 ರವರೆಗೆ ನಿಗಧಿಯಾಗಿರುತ್ತದೆ.

ಈ ನಿಟ್ಟಿನಲ್ಲಿ ಈ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ತಾಂತ್ರಿಕ/ಇಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರು ಹಾಗೂ ವಿಧ್ಯಾರ್ಥಿಗಳು ದಿನಾಂಕ: 28.03.2025 ರೊಳಗಾಗಿ ಗರಿಷ್ಠ ಮಟ್ಟದಲ್ಲಿ ಜಲ ಸಂರಕ್ಷಣೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಮುಂದುವರೆದು, ಈ ಸಂಬಂಧ ಅವಶ್ಯವಿರುವ ಸೂಚನೆಗಳು ಈ ಕೆಳಕಂಡಂತಿದೆ.

1. ಪ್ರತಿಜ್ಞಾವಿಧಿ ಅರ್ಜಿಗಳನ್ನು ಎಲ್ಲಾ ಕಾಲೇಜುಗಳಿಗೆ ದಿನಾಂಕ: 25.03.2025 ರಂದು ಮಂಡಳಿಯ ವತಿಯಿಂದ ಜಿಲ್ಲಾವಾರು ನೇಮಕವಾಗಿರುವ ಮಂಡಳಿಯ ನೋಡಲ್ ಅಧಿಕಾರಿಗಳ ಮುಖೇನ ಕಳುಹಿಸಿಕೊಡಲಾಗುವುದು.

2. ಎಲ್ಲಾ ಕಾಲೇಜಿನ ಪ್ರಾಂಶುಪಾಲರು ದಿನಾಂಕ: 26.03.2025 ಹಾಗೂ 27.03.2025 ರಂದು ಪ್ರತಿಜ್ಞಾವಿಧಿ ಮಾಡಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಿದ ಅರ್ಜಿಗಳನ್ನು ದಿನಾಂಕ: 27.03.2025 ಸಂಜೆಯೊಳಗಾಗಿ ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳಿಗೆ ತಲುಪಿಸುವುದು.

ಹೆಚ್ಚಿನ ಸಂಪರ್ಕಕ್ಕಾಗಿ: ಶ್ರೀ ರಾಮಲಿಂಗಪ್ಪ- 9480841203

ಕು.ಪೂರ್ಣಿಮ -9739976143
ಆನಂದ್- 8217620625
ಮದನ್- 9742428822

3. ಹಾಗೆಯೇ, ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದ ವಿಡಿಯೋ ಹಾಗೂ ಛಾಯಾಚಿತ್ರಗಳನ್ನು (Geo Tagged Photo) chairmanbwessb123@gmail.com ಐ.ಡಿ ಗೆ ಕಳುಹಿಸುವುದು ಹಾಗೂ https://jalavejeeva.com ರಲ್ಲು ಸಹ ದಾಖಲು ಮಾಡಲು ಅವಕಾಶಗಳಿದ್ದು ಅದರಲ್ಲಿಯೂ ಸಹ ದಾಖಲು ಮಾಡುವುದು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

7 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

8 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

8 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

9 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

10 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

11 hours ago