ಬೆಂಗಳೂರು.31.ಮೇ.25:- ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ.
ಹೌದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ.
ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಇಲಾಖೆಯ ಗೈಡ್ಲೈನ್ಸ್
ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…