Home » ಲೈವ್ ನ್ಯೂಸ್ » ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ `CCTV’ ಅಳವಡಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ `CCTV’ ಅಳವಡಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

Facebook
X
WhatsApp
Telegram

ಬೆಂಗಳೂರು.17.ಜುಲೈ.25:- ರಾಜ್ಯ ಸರಕಾರ. ರ್ಯಾಗಿಂಗ್, ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಆದೇಶ ಹೊರಡಿಸಿದೆ.

ಹೌದು, ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲ ಪದವಿ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರಾಗಿಂಗ್ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿಇದರ ನಿಯಂತ್ರಣಕ್ಕೆ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

ಇನ್ನು ಈಗಾಗಲೇ ಸಿಸಿಟಿವಿ ಅಳವಡಿಕೆ ಆಗಿರುವ ಕಾಲೇಜುಗಳಲ್ಲಿ ಅವುಗಳ ಕಾರ್ಯನಿರ್ವ ಹಿಸುತ್ತಿರುವ ವಿವರಗಳನ್ನು ಜು.21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology