ರಾಜ್ಯದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ

ರಾಜ್ಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ VTU (ವಿಟಿಯು) ಕಲಬುರಗಿದಲ್ಲಿ  ಇಂದು ಶುಕ್ರವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 70 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ವಿಟಿಯು ಪ್ರಾದೇಶಿಕ ಕೇಂದ್ರದ ಸ್ನಾತ್ತಕೋತ್ತರ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿ.ಟೆಕ್‌, ಎಂ.ಟೆಕ್‌, ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರತಿಭಾನ್ವಿತ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಲ್ಯಾಪ್‌ಟಾಪ್‌ ನೀಡಲಾಯಿತು.

ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರ ನಿರ್ದೇಶಕ ಪ್ರೊ. ಬಿ.ಶಂಭುಲಿಂಗಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಅಕಾಡೆಮಿಕ್ ಮತ್ತು ತಾಂತ್ರಿಕ ನಿಪುಣತೆ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ನಿಮ್ಮ ಅಧ್ಯಯನ ಹಾಗೂ ತಾಂತ್ರಿಕ ಕೌಶಲ ವೃದ್ಧಿಗೆ ಲ್ಯಾಪ್‌ಟಾಪ್‌ಗಳನ್ನು ಸದುಪಯೋಗಪಡಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಸಂಯೋಜಕ ಪ್ರೊ.ಎಂ.ಎ.ವಹೀದ್, ಪ್ರೊ.ಸತೀಶ ಉ‍ಪಳಾಂವಕರ್, ಪ್ರೊ.ಬ್ರಿಜ್‌ಭೂಷಣ್ ಎಸ್‌, ಪ್ರೊ.ರಾಹುಲ್ ಮೂಲಭಾರತಿ, ಪ್ರೊ.ವೀರೇಶ ಪೂಜಾರಿ ಸೇರಿದಂತೆ ಹಲವರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago