ರಾಜ್ಯದ ಗ್ರಾಮೀಣ ಜನತೆಗೆ ಆಸ್ತಿಗಳಿಗೆ ಇ-ಸ್ವತ್ತು’ ಕುರಿತು ಸರ್ಕಾರದಿಂದ  ಆದೇಶ.!

ಬೆಂಗಳೂರು ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಸಹಿ ಸುಧಿ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ: 17.05.2025 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಹಾಗೂ ದಿನಾಂಕ:17.05.2025 ರಂದು ಆಯುಕ್ತರು, ಕಂದಾಯ ಇಲಾಖೆ ರವರ ಪತ್ರದಲ್ಲಿ ಕೋರಿರುವಂತೆ, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಯ ಅಧಿಕೃತ ಹಕ್ಕುದಾಖಲೆಯನ್ನು ನೀಡಲಾಗುತ್ತಿದೆ. ಇತ್ತೀಚಿಗೆ ಕಂದಾಯ, ನೋಂದಣಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ಸೇರಿ ಹಕ್ಕುಪತ್ರವನ್ನು ನೋಂದಾಯಸಿ ಇ-ಸ್ವತ್ತು ದಾಖಲೆಯನ್ನು ಫಲಾನುಭವಿಗೆ ನೀಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ತಹಶೀಲ್ದಾರರ ಹೆಸರಿಗೆ ದಾಖಲೆ ನಮೂದಿಸುವಾಗ ಶುಲ್ಕ ವಿನಾಯಿತಿ ನೀಡಿದ ಆದರೆ ತಹಶೀಲ್ದಾರರು ಫಲಾನುಭವಿಗೆ ಆಸ್ತಿಯನ್ನು ನೋಂದಾಯಿಸಿ ನೀಡುವ ಸಂದರ್ಭದಲ್ಲಿ 1000 ಶುಲ್ಕವನ್ನು ಪಾವತಿಸಬೇಕಾಗಿದೆ. . ಈ ಯೋಜನೆಯ ಫಲಾನುಭವಿಗಳಿಗೆ ಪ್ರಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ನೀಡುವ ಹಕ್ಕುಪತ್ರಗಳಿಗೆ ಡ್ಯೂಟೇಶನ್ ಶುಲ್ಕದಲ್ಲಿ ರಿಯಾಯತಿ ನೀಡುವ ಬಗ್ಗೆ ಪರಿಶೀಲಿಸಲು ತಿಳಿಸಿರುತ್ತಾರೆ.

ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಹೊಸದಾಗಿ ಪುಕ್ರಿಯೆಯನ್ನು ಸೂಚಿಸುವುದು ಅಗತ್ಯವೆಂದು ಕಂಡುಬಂದಿರುವುದರಿಂದ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ94(ಸಿ), 94(ಸಿ.ಸಿ) ಹಾಗೂ 94-ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯತಿ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ 94(ಸಿ), 94(ಸಿ.ಸಿ) ಹಾಗೂ 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ವಿತರಿಸುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು, ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮಪಂಚಾಯತಿ ಸಂಗ್ರಹಿಸಲು ಆದೇಶಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago