ರಾಜ್ಯದ ಪತ್ರಕರ್ತರಿಗೆ ನಿವೇಶನ ಮನೆ ಹಂಚಿಕೆಯಲ್ಲಿ ಮೀಸಲು:ಡಿಸಿಎಂ ಡಿ.ಕೆ ಶಿವಕುಮಾರ

ಬೆಂಗಳೂರು.14.ಮಾರ್ಚ.25:- ರಾಜ್ಯ ಸರ್ಕಾರ ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮಂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಯಾವುದೇ ಸ್ಥಳೀಯ ಸಂಸ್ಥೆಗಳಲ್ಲಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳು, ಬಿಡಿಎ ಸೇರಿದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆಗೆ ಈ ಬಗ್ಗೆ ಸಮಾಲೋಚನೆ ನಡೆಸಿದ ಡಿಸಿಎಂ ಕಾನೂನು ತೊಡಕುಗಳು ಏನೇನು ಇದೆ? ಯಾವ ರೀತಿಯಲ್ಲಿ ಪತ್ರಕರ್ತರಿಗೆ ಸಹಾಯ ಮಾಡಬಹುದು ಎಂದು ಚರ್ಚೆ ನಡೆಸಿದರು.

ಶೇ.5 ರಿಯಾಯಿತಿ ಕೊಡುವುದು ಕಷ್ಟವಾಗಬಹುದು. ಆದರೆ, ಕನಿಷ್ಠ ಶೇ.1 ರಿಂದ ಶೇ.2ರಷ್ಟು ರಿಯಾಯಿತಿ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಬಗ್ಗೆ ಶೀಘ್ರವೇ ಆದೇಶವನ್ನು ಹೊರಡಿಸಲು ಅಗತ್ಯವಿರುವ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.

ಅಪರ ಮುಖ್ಯಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್.ಉಮಾಶಂಕರ್, ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್, ಡಿಸಿಎಂ ವಿಶೇಷಾಧಿಕಾರಿ ರಾಜೇಂದ್ರಪ್ರಸಾದ್ ಮತ್ತಿತರರು ಇದ್ದರು.

ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು 24X7 ಮತ್ತು 365 ದಿನ್  ರಾಜ್ಯದ ಪತ್ರಕರ್ತರ ಹಿತ ದೃಷ್ಟಿಇಂದ್ ಕಾರ್ಯ ಮಾಡುತ್ತಿದ್ದಾರೆ

prajaprabhat

Recent Posts

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

14 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

4 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

4 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

10 hours ago