Home » ಲೈವ್ ನ್ಯೂಸ್ » ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ಗೃಹ ಸಚಿವರು ಪ್ರಿಯಾಂಕ್ ಖರ್ಗೆ

ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ಗೃಹ ಸಚಿವರು ಪ್ರಿಯಾಂಕ್ ಖರ್ಗೆ

Facebook
X
WhatsApp
Telegram

ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯೊಂದಿಗೆ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದೆ.

ಬೆಂಗಳೂರು.26.ಜುಲೈ.26: ರಾಜ್ಯ ಸರ್ಕಾರ ರಾಜ್ಯದಲ್ಲಿ ಅಗ್ನಿಶಾಮಕ, ಶೋಧನೆ ಮತ್ತು ರಕ್ಷಣಾ ಕಾರ್ಯಗಳು, ನೈಸರ್ಗಿಕ ವಿಕೋಪಗಳಿಗೆ ತ್ವರಿತ ಸ್ಪಂದನೆ ಹಾಗೂ ವಿಪತ್ತು ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದೆ.

  • ರಾಜ್ಯದ 219 ಅಗ್ನಿಶಾಮಕ ಠಾಣೆಗಳ ಕಾರ್ಯನಿರ್ವಹಣೆಯ ಸ್ಥಿತಿ ಪರಿಶೀಲನೆ ನಡೆಸಿ ಶೀಘ್ರದಲ್ಲಿಯೇ ವರದಿಗೆ ಸೂಚನೆ.
  • 490 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರ್ಥಿಕ ಇಲಾಖೆಯ ಸಮನ್ವಯದೊಂದಿಗೆ ತ್ವರಿತಗೊಳಿಸಿ, 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ.
  • ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡವಿಲ್ಲದೆ ಇತರ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಠಾಣೆಗಳ ಮಾಹಿತಿ ಸಲ್ಲಿಸಿ, ಅಗತ್ಯವಿರುವ ಜಿಲ್ಲೆಗಳಲ್ಲಿ ಸ್ವಂತ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ.
  • ಸಿಬ್ಬಂದಿಗೆ ಅಗತ್ಯವಿರುವ ನಿವಾಸ ಸೌಲಭ್ಯಗಳನ್ನು ಶೇ.50ರಷ್ಟು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚನೆ.
  • ವಿಪತ್ತು ಸಂದರ್ಭಗಳಲ್ಲಿ ತ್ವರಿತ ಮತ್ತು ಪರಿಣಾಮಕಾರಿ ಸ್ಪಂದನೆ ಅತ್ಯಗತ್ಯವಾಗಿದೆ. SDRF ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಬೇಕೆಂದು ತಿಳಿಸಲಾಗಿದೆ.
  • ಗೃಹರಕ್ಷಕ ದಳವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಾರ್ಯಕ್ರಮಗಳ ರೂಪಿಸಿ, ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಸೂಚನೆ.

ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ಅಗ್ನಿಶಾಮಕ, ವಿಪತ್ತು ನಿರ್ವಹಣೆ ಹಾಗೂ ಗೃಹರಕ್ಷಕ ದಳಗಳನ್ನು ಇನ್ನಷ್ಟು ಆಧುನಿಕ, ಸಬಲ ಮತ್ತು ಜನಸ್ನೇಹಿಯಾಗಿಸಲು ಸರ್ಕಾರ ಬದ್ಧವಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology