ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊçಫಿ, ಪಾರ್ಕಿನ್ ಸನ್ಸ್, ಮಲ್ಟಿಪಲ್ ಸ್ಕೊ÷್ಲರೋಸಿಸ್, ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ದೋಷ ಹೊಂದಿದ ದೃಷ್ಠಿ ದೋಷವುಳ್ಳ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ 1,000 ರೂ.

ಪ್ರೋತ್ಸಾಹಧನ ನೀಡಲಾಗುತ್ತದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು.

ಇದರ ಪ್ರಯೋಜನ ಪಡೆಯಲು 07 ವಿಧಗಳ ವಿಕಲಚೇತನರು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ(ಯು.ಡಿ.ಐ.ಡಿ) ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಹಾಗೂ ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆಗಳನ್ನುwww.dwdsc.kar.nic.in ವೆಬ್‌ಸೈಟ್‌ನಿಂದ ನೇರವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ತಾಲ್ಲೂಕು ಪಂಚಾಯತ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ/ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

5 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

9 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

11 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

11 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

11 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

11 hours ago