ಬೆಂಗಳೂರು : 2025-26ನೇ ಸಾಲಿಗೆ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಿಸುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡುತ್ತಿದೆ ಹಾಗೂ 2017-18 ನೇ ಸಾಲಿನಿಂದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುತ್ತಿದೆ.
2023-24ನೇ ಸಾಲಿನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಈ ಸಂಬಂಧ ವಿದ್ಯಾರ್ಥಿ ಪಾಸುಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ. ಕೆ-1 / ಜಿ-1 ಕೇಂದ್ರಗಳ ಮುಖಾಂತರ ಪಾಸುಗಳನ್ನು ವಿತರಿಸುವ ವ್ಯವಸ್ಥೆಯನ್ನು ಕರಾರಸಾ ನಿಗಮದಿಂದ ಕಲ್ಪಿಸಲಾಗಿರುತ್ತದೆ.
ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ವಿದ್ಯಾರ್ಥಿ ಪಾಸುಗಳನ್ನು ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಡಿಸಿಎಸ್ ಇಲಾಖೆಯು ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು.
ವಿದ್ಯಾರ್ಥಿಗಳ ವಿವರಗಳನ್ನು ದಾಖಲಿಸಲು. SATS / UUCMS /PUE ಡಾಟಾಬೇಸ್ ಜೊತೆಗೆ ಆಧಾರ್ / ಕುಟುಂಬ ಡಾಟಾಬೇಸ್‌ನಿಂದ ವಿದ್ಯಾರ್ಥಿಗಳ ವಿವರಗಳು ದಾಖಲಾಗಲಿವೆ. ಇದರ ಜೊತೆಗೆ ಕೆ-1 (ಕರ್ನಾಟಕ ಒನ್), ಜಿ-1 (ಗ್ರಾಮ ಒನ್) ಕೇಂದ್ರಗಳು ಹಾಗೂ ಇಡಿಸಿಎಸ್ ಸಿಬ್ಬಂದಿಗಳ ನಿಯೋಜನೆಯೊಂದಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿನ ಪಾಸ್ ಕೌಂಟರ್‌ಗಳಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು.
ಇಡಿಸಿಎಸ್ ಇಲಾಖೆಯ ನಿಯೋಜಿತ ಸಿಬ್ಬಂದಿಗಳು ನಿಗಮದ ಪಾಸ್ ಕೌಂಟರ್ಗಳಲ್ಲಿ ಹಾಗೂ ಅಗತ್ಯವಿರುವೆಡೆ ಶಾಲಾ / ಕಾಲೇಜುಗಳಲ್ಲಿ ಕೌಂಟರ್ ತೆರೆದು ಬಸ್ ಪಾಸ್ ವಿತರಣೆ ಮಾಡಲಿದ್ದಾರೆ.
ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಗಮನಿಸಬೇಕಾದ ನಿರ್ದಿಷ್ಟ ಅಂಶಗಳು:
ವಿದ್ಯಾರ್ಥಿ ಬಸ್ ಪಾಸ್ ವೈಯಕ್ತಿಕ ಮಾಹಿತಿಯುಳ್ಳ ಪಿವಿಸಿ ಕಾರ್ಡ್ ಆಗಿದ್ದು, ಸದರಿ ಕಾರ್ಡಿನ ಮೇಲೆ ವಿದ್ಯಾರ್ಥಿಯ ಭಾವಚಿತ್ರ, ಹೆಸರು, ಪ್ರಯಾಣದ ಮಾರ್ಗ, ಪಾಸಿನ ಮಾನ್ಯತಾ ಅವಧಿ ಮುದ್ರಿತವಾಗುತ್ತದೆ.
ಪ್ರತಿಯೊಂದು ಕಾರ್ಡಿಗೂ ಅನನ್ಯ (unique) ಸಂಖ್ಯೆಯಿದ್ದು ಕಾರ್ಡಿನ ಮೇಲ್ಬಾಗದಲ್ಲಿ ಮುದ್ರಿತವಾಗುತ್ತದೆ. ಅಲ್ಲದೇ ಕ್ಯೂಆರ್ ಕೋಡ್‌ನಲ್ಲಿ ವಿದ್ಯಾರ್ಥಿ ಮಾಹಿತಿ, ಪ್ರಯಾಣದ ಮಾರ್ಗ, ಪಾಸ್‌ನ ಮಾನ್ಯತೆ, ಅವಧಿ ಒಳಗೊಂಡಿರುತ್ತದೆ.
ಸರ್ಕಾರದ ನೂತನ ಯೋಜನೆಯಾದ “ಶಕ್ತಿ ಯೋಜನೆ”ಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ) ರಾಜ್ಯದೊಳಗೆ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಈ ಯೋಜನೆಯಡಿ ರಾಜ್ಯದೊಳಗೆ ಪ್ರಯಾಣಿಸುವ ವಿದ್ಯಾರ್ಥಿನಿಯರು ವಿದ್ಯಾರ್ಥಿ ಬಸ್ ಪಾಸ್ ಪಡೆಯುವ ಅಗತ್ಯವಿರುವುದಿಲ್ಲ. ಆದರೆ, ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯಲು ಇಚ್ಚಿಸಿದಲ್ಲಿ ಪಾಸನ್ನು ವಿತರಿಸಬಹುದಾಗಿರುತ್ತದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…