ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ 800 ಹುದ್ದೆಗಳ ಭರ್ತಿಗೆ ಅಣುಮೋದನೆ.!

ಬೆಂಗಳೂರು.23.ಮೇ.25:- ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವಂತ 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮೋದನೆ ನೀಡಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ ಹುದ್ದೆಗಳನ್ನು 2021-22ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಿಗೆ ಪತ್ರ ಹೊರಡಿಸಲಾಗಿರುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಮುಂದುವರೆಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಿಗೆ ಪತ್ರ ಹೊರಡಿಸಲಾಗಿರುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಮುಂದುವರೆಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಣ ಸೇವೆಗಳು ಇವರಿಗೆ ಪತ್ರ
ನೀಡುವಂತೆ ಕೋರಲಾಗಿದೆ.

ನಿರ್ದೇಶನಾಲಯದ ಏಕ ಕಡತದಲ್ಲಿ ಸದರಿ ಹೊರಗುತ್ತಿಗೆ ನೌಕರರ ಸೇವೆಯ ಅವಧಿಯು ದಿನಾಂಕ: 03-02-2025ಕ್ಕೆ ಅಂತ್ಯವಾಗಿರುವುದರಿಂದ, ಪ್ರಸ್ತುತ ನೇರ ನೇಮಕಾತಿ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಇನ್ನೂ ಸದರಿ ಹುದ್ದೆಗಳಿಗೆ ನೇರ ನೇಮಕಾತಿ ಮುಖೇನ ಭರ್ತಿಯಾಗದೇ ಇರುವುದರಿಂದ ಪ್ರಸ್ತುತ ಹೊರಗುತ್ತಿಗೆ ಆಧಾರದ ಮೇಲೆ 200 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿ ಅಧಿಕಾರಿಗಳ ಸೇವೆಯನ್ನು ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವವರೆಗೂ ಅಥವಾ ಮುಂದಿನ ಒಂದು ವರ್ಷದ ಅವಧಿಗೆ ಮುಂದುವರೆಸಲು ಅನುಮತಿಯನ್ನು ನೀಡುವಂತೆ ಕೋರಲಾಗಿರುತ್ತದೆ.

ಆದ್ದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್‌ನ ಕೆಲವೊಂದು ಹುದ್ದೆಗಳನ್ನು ನೇರ ನೇಮಕಾತಿ ಮುಖೇನ ತುಂಬುವವರೆಗೆ ಗುತ್ತಿಗೆ ಮುಖೇನ ತುಂಬಲು ನಿರ್ಧರಿಸಿದ್ದು, ಅದರಂತೆ ಈ ಕೆಳಕಂಡ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಮತ್ತು 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳಲು ಆದೇಶಿಸಿದೆ.

ಷರತ್ತುಗಳು:-

1. ಪ್ರಸ್ತುತ ಚಾಲನೆಯಲ್ಲಿರುವ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಹುದ್ದೆಗಳು ಭರ್ತಿಯಾದ ನಂತರ 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಮತ್ತು 400 ಫಾರ್ಮಾಸಿಸ್ಟ್ ಹುದ್ದೆಗಳು ಗುತ್ತಿಗೆ ಸೇವೆಯನ್ನು ರದ್ದುಗೊಳಿಸತಕ್ಕದ್ದು.

2. ಆರೋಗ್ಯ ಇಲಾಖೆಯ ನಾರ್ಮಸ್ (Norms) ಪ್ರಕಾರ ಮಂಜೂರಾದ / ಭರ್ತಿ ಇರುವ / ಖಾಲಿ ಇರುವ ಹುದ್ದೆಗಳೊಂದಿಗೆ ತರ್ಕಬದ್ಧಗೊಳಿಸಿ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಕೇಂದ್ರಗಳಿಂದ ಹುದ್ದೆಗಳನ್ನು ಮರು ಹೊಂದಾಣಿಕೆ ಮಾಡಲು ಕ್ರಮವಹಿಸುವುದು.

3. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವಾಗ ಭವಿಷ್ಯದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನಿನ ತೊಡಕುಗಳು ಉದ್ಭವಿಸದಂತೆ ಕ್ರಮವಹಿಸುವುದು,

4. ಗುತ್ತಿಗೆ ಆಧಾರದ ಮೇಲಿನ ಸಿಬ್ಬಂದಿಗಳ ಆಯ್ಕೆಯನ್ನು ಈ ಹಿಂದಿನ ಗುತ್ತಿಗೆ ಅವಧಿಯ ಸೇವೆಯನ್ನು ಪರಿಗಣಿಸದೆ, ಮತ್ತೆ ಹೊಸದಾಗಿ ಸೇವೆಗೆ ಸೇರಿಸಿಕೊಂಡಂತೆ ಪರಿಗಣಿಸಿ ಆಯ್ಕೆ ಮಾಡುವುದು (Thé Recruitment Should be done De-novo, without considering the pre- service of contract employees, as per extant C/R rules.)

5. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ಫಾರ್ಮಾಸಿಸ್ ಮತ್ತು ಕಿರಿಯ ಪ್ರಯೋಗಶಾಲಾ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪೂರ್ವದಲ್ಲಿ ಜಿಲ್ಲಾವಾರು ಮತ್ತು ಸಿಬ್ಬಂದಿಗಳ ಕೊರತೆ ಇರುವ ಕೇಂದ್ರಗಳ ಮತ್ತು ಜಿಲ್ಲಾವಾರು ಮಾಹಿತಿಯನ್ನು ಮತ್ತು ಯಾವ ಜಿಲ್ಲೆ ಮತ್ತು ಕೇಂದ್ರಗಳಿಗೆ ಪ್ರಸ್ತಾಪಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬುವ ಅವಶ್ಯಕತೆ ಇದೆ ಎಂಬುದರ ಪಟ್ಟಿಯನ್ನು ಸರ್ಕಾರಕ್ಕೆ ಒದಗಿಸುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 493 ವೆಚ್ಚ-5/2022, ದಿನಾಂಕ: 17-05- 2025 ರಲ್ಲಿ ನೀಡಿರುವ ಸಹಮತಿಯ ಮೇರೆಗೆ ಹೊರಡಿಸಲಾಗಿದೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

4 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

8 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

14 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

14 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

15 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

15 hours ago