ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು,

ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿದ್ದು, ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿಧ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನು. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ವಿದ್ಯಾರ್ಥಿಗಳ ಕಲಿಕೆಯಲ್ಲಿ ಕುಂಠಿತವಾಗುವುದು ಅಷ್ಟೇ ಅಲ್ಲದೇ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ಈಗಾಗಲೇ ವರದಿಯಾಗಿದೆ. ಈಗ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಪಕರ ಕೊರತೆ ಎದುರಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ, ಕೇಂದ್ರ ವಿಶ್ವವಿದ್ಯಾಲಯ ಹಾಗೂ ಮಹರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಿಕೊಡಲು ಪ್ರಾಧ್ಯಾಪಕರು ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಅತಿಥಿ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ದೊರೆಯುತ್ತಿದೆ. ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ಅಡ್ಮಿಷನ್ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರುತ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟು ಕೊಂಡಿರುತ್ತಾರೆ. ಆದರೆ ವಿಧ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿಯನ್ನು ಪೂರೈಸದ ಸರ್ಕಾರದ ನಡೆ ಬೇಸರ ಉಂಟು ಮಾಡುತ್ತಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬರುತ್ತಿವೆ.


ಒಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಾತ್ರ ಅಲ್ಲದೆ ವಿಶ್ವ ವಿದ್ಯಾಲಯಗಳಲ್ಲಿ ಸಹ ಸೂಕ್ತ ಮತ್ತು ಅಗತ್ಯ ಪ್ರಮಾಣದ ಬೋಧನಾ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಬೇಕಾದ ಪದವಿ ವಿಧ್ಯಾರ್ಥಿಗಳಿಗೆ ಹಿನ್ನಡೆ ಆಗುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ಪ್ರಾಧ್ಯಾಪಕರನ್ನು ನೇಮಕ ಮಾಡುವ ಪ್ರಕ್ರಿಯೆಗೆ ವೇಗ ನೀಡಬೇಕಾಗಿದೆ.

ವಿಧ್ಯಾರ್ಥಿಗಳ ಬೇಡಿಕೆಗೆ ತಕ್ಕಂತ ನುರಿತ ಕಾಯಂ ಪ್ರಾಧ್ಯಾಪಕರು ವಿಶ್ವ ವಿದ್ಯಾಲಯಗಳಲ್ಲಿ ಇಲ್ಲದಂತಾಗಿದ್ದು, ಪ್ರತಿ ಬಾರಿಯೂ ಅತಿಥಿ ಉಪನ್ಯಾಸಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಬೋಧನೆಯಿಂದಲೇ ಸ್ನಾತಕೋತ್ತರ ವಿಧ್ಯಾರ್ಥಿಗಳು ತೃಪ್ತಿ ಪಡುವಂತಾಗಿದೆ. ನುರಿತ ಕಾಯಂ ಉಪನ್ಯಾಸಕರು ಹಾಗೂ ತಾತ್ಕಾಲಿಕ ಉಪನ್ಯಾಸಕರ ಬೋಧನೆ ನಡುವೆ ಸಾಕಷ್ಟು ವ್ಯತ್ಯಾಸ ಇದ್ದು, ವಿಧ್ಯಾರ್ಥಿಗಳ ಕಲಿಕೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಆದಷ್ಟು ಬೇಗ ಕಾಯಂ ಪ್ರಾಧ್ಯಾಪಕರನ್ನು ನೇಮಕ ಮಾಡುವಂತೆ ವಿದ್ಯಾರ್ಥಿಗಳು ಹಾಗೂ ಕುಲಪತಿಗಳು ಒತ್ತಾಯಿಸುತ್ತಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

9 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago