ರಾಜ್ಯದ ಶಾಲಾ ಮಕ್ಕಳಿಗೆ 2025-26ನೇ ಸಾಲಿನಲ್ಲೂ ‘ಮೊಟ್ಟೆ/ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

ಬೆಂಗಳೂರು.06.ಜೂನ್.25:- 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದ್ದು ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. *ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.”

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಗೆ ಸಂಬಂಧಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾದ ಕೇಂದ್ರ ಸರ್ಕಾರದ ಪಿ.ಎ.ಬಿ ಸಭಾ ನಡವಳಿಯಲ್ಲಿ Flexibility for New Intervention ಚಟುವಟಿಕೆಗಳಡಿ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 1 ರಿಂದ 08ನೇ ತರಗತಿಗಳ ವರೆಗೆ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ ಅಥವಾ ಇತರೆ ಪೌಷ್ಠಿಕ ಆಹಾರ ಪದಾರ್ಥವನ್ನು ವಿತರಿಸಲು ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (5)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಕೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಾ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

29 minutes ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

33 minutes ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

37 minutes ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

42 minutes ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

46 minutes ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

2 hours ago