ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ  ಗೌರವಧನ ಹೆಚ್ಚಳ

ಬೆಂಗಳೂರು.16.ಮೇ.25:- ಇಂದು ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ.

ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ವೇತನ ಹೆಚ್ಚಳ ಆದೇಶ ಇಂದೇ ಮಂಜೂರಾತಿ ನೀಡಿದೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಪಡಿಸಲಾಗಿತ್ತು ಎಂದು ಹೇಳಿದ್ದಾರೆ.

ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ದಿನಾಂಕ:10.10.2023 ರ ಪತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರುಗಳಿಗೆ ವಸ್ತುತ ನೀಡಲಾಗುತ್ತಿರುವ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ಪರಿಷ್ಕರಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.

2025-26 ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳಿಗೆ ಪುಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ರೂ.2000/- (ಎರಡು ಸಾವಿರ ರೂಪಾಯಿಗಳು ಮಾತ್ರ ಹೆಚ್ಚಿಸಲು ಮೇಲೆ (4) ರಲ್ಲಿ ಓದಲಾದ Budget Advice ನಲ್ಲಿ ಆರ್ಥಿಕ ಇಲಾಖೆಯ ತಿಳಿಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ / ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ವರಿಷ್ಕರಿಸಿ ಆದೇಶಿಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಿದೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳದ ವಿವರ

ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ರೂ.10,000ದಿಂದ ರೂ.12,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.
ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ.10,500ರಿಂದ ರೂ.12,500ಕ್ಕೆ ಹೆಚ್ಚಳ ಮಾಡಲಾಗಿದೆ.
ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ ರೂ.12,000ದಿಂದ ರೂ.14,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 351 ವೆಚ್ಚ-8/2025 ದಿನಾಂಕ: 28.04.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

1 hour ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

2 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

2 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

3 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

3 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

3 hours ago