ಬೆಂಗಳೂರು.10.ಜೂನ್.25:-ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಗಳನ್ನು ಪ್ರದರ್ಶಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲೆಗಳಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು.
ಸರ್ಕಾರಿ ಶಾಲೆಗಳಲ್ಲಿ ಉಚಿತ ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಉಚಿತವಾಗಿ ನೀಡಲಾಗುವುದು.
ಪ್ರತಿದಿನ ಮಧ್ಯಾಹ್ನ ಬಿಸಿಯೂಟ, ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು, ಕ್ಷೀರ ಭಾಗ್ಯದ ಜೊತೆಗೆ ರಾಗಿ ಮಾಲ್ಟ್ ವಿತರಣೆ ಸೇರಿ ಸರ್ಕಾರಿ ಶಾಲೆಗಳಲ್ಲಿನ ಇತರೆ ಸೌಲಭ್ಯ, ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಇರುವ ಕಲಿಕಾ ಚಿಲುಮೆ, ಗಣಿತ ಗಣಕ, ಓದು ಕರ್ನಾಟಕ, ಕಲಿಕಾ ದೀಪ, ಜ್ಞಾನ ಸೇತು, ವಿದ್ಯಾ ವಿಜೇತ ಮೊದಲಾದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡಂತೆ ಪೋಸ್ಟರ್ ಸಿದ್ಧಪಡಿಸಲಾಗಿದೆ.
2024 -25 ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ಶಿರಸಿಯ ಸರ್ಕಾರಿ ಉರ್ದು ಪ್ರೌಢಶಾಲೆಯ ಶಗುಪ್ತ ಅಂಜುಂ, ಬೆಳಗಾವಿ ಜಿಲ್ಲೆ ದೇವಲಾಪುರದ ಸರ್ಕಾರಿ ಪ್ರೌಢಶಾಲೆಯ ರೂಪಾ ಚೆನ್ನೇಗೌಡ ಪಾಟೀಲ್ ಅವರ ಸಾಧನೆಯನ್ನು ಪೋಸ್ಟರ್ ನಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡಲಾಗಿದೆ.
ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…
ಬಾಗಲಕೋಟ.11.ಜೂನ್.25:- ರಾಜ್ಯ ಸರ್ಕಾರ ಇನ್ಮುಂದೆ ಫೆಸಿಯಲ್ ಅಟೆಂಡೆನ್ಸ್ ಮಾಡೋಕೆ ನಿರ್ಧರಿಸಿದೆ. ಡಿಜಿಟಲ್ ಯುಗ ಆಗಿರುವ ಕಾರಣ ಸರ್ಕಾರಿ ಶಾಲೆಗಳ ಮಕ್ಕಳಿಗೂ…
ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…
ಬಾಗಲಕೋಟ.11.ಜೂನ್.25:- ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…