ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದ 6 ದಿನವೂ ಮೊಟ್ಟೆ, ಬಾಳೆಹಣ್ಣು’ ವಿತರಣೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು.18.ಜುಲೈ.25:- 2024-25 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಿರುವ ಸುತ್ತೋಲೆಯಂತೆ ವಾರದ ಆರು ದಿನಗಳಂದು ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸದೇ, ತಮ್ಮದೇ ಆದ ವಿಧಾನವನ್ನು ಅನುಸರಿಸಿರುವ ಶಾಲಾ ಎಸ್.ಡಿ.ಎಂ.ಸಿ.ರವರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಿತ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿರುವಂತೆ, 2024-25ನೇ ಸಾಲಿನಿಂದ ಸೆಪ್ಟೆಂಬರ್ 2024 ರಿಂದ ಉಲ್ಲೇಖಿತ (1)ರ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಅನುಷ್ಠಾನಗೊಳಿಸಿರುವಂತೆ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳಂದು ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಮೊಟ್ಟೆ ಸ್ವೀಕರಿಸದೇ ಇರುವ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ.

ಆದರೆ, ರಾಜ್ಯದ ಕೆಲವು ಶಾಲೆಗಳಲ್ಲಿ ಎಸ್.ಡಿ.ಎಂ.ಸಿ. ರವರು ಸಭೆ ನಡೆಸಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನಗಳು ಮೊಟ್ಟೆ, ಉಳಿದ ಮೂರು ದಿನ ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ, ಇನ್ನೂ ಕೆಲವು ಶಾಲೆಗಳಲ್ಲಿ ಸೋಮವಾರ, ಶನಿವಾರದಂದು ಮೊಟ್ಟೆ ವಿತರಣೆ ಮಾಡದೇ ಬಾಳೆಹಣ್ಣು ವಿತರಣೆ ಮಾಡಲು ನಿರ್ಣಯಿಸಿರುವುದು, ಪೋಷಕರ ಒಪ್ಪಿಗೆ ಪತ್ರ ಪಡೆದಿದ್ದಾಗೂ ಸಹ ವಾರದ ಆರೂ ದಿನಗಳಂದು ಮೊಟ್ಟೆ ಸ್ವೀಕರಿಸುವ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸದೇ ಬಾಳೆಹಣ್ಣು ವಿತರಿಸುವ ಬಗ್ಗೆ ಏಕಪಕ್ಷೀಯವಾಗಿ ನಿರ್ಣಯಿಸಿರುವುದು, ಇಲಾಖೆಯ ಸೂಚನೆಗಳನ್ನು ಎಸ್.ಡಿ.ಎಂ.ಸಿ.ರವರು ಕೈಬಿಟ್ಟಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಮುಂದುವರೆದು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 07.07.2025 ರಂದು ಈ ಕಛೇರಿಯಿಂದ ಜ್ಞಾಪನವನ್ನು (ಉಲ್ಲೇಖ-3) ಹೊರಡಿಸಿದ್ದು,ಸಂಬಂಧಿಸಿದ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅನುಷ್ಠಾನಾಧಿಕಾರಿಗಳಿಗೆ ಇ-ಮೇಲ್ ಮೂಲಕ ದಿನಾಂಕ:07.07.2025 ರಂದು ಜ್ಞಾಪನವನ್ನು ಕಳುಹಿಸಲಾಗಿದೆ.

ಸದರಿ ಜ್ಞಾಪನಕ್ಕೆ ತೆಗೆದುಕೊಂಡಿರುವ ಕ್ರಮದ ಕುರಿತು ಜಿಲ್ಲೆಗಳಿಂದ ದಿನಾಂಕ:15.07.2025 ರ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೂ ಇದುವರೆಗೂ ಯಾವುದೇ ಅಧಿಕಾರಿಗಳಿಂದ ಈ ಕುರಿತು ಕಛೇರಿಗೆ ವರಿದಿಗಳನ್ನು ಸಲ್ಲಿಸಿರುವುದಿಲ್ಲ. ದಿನಾಂಕ: 21.07.2025 ರ ಒಳಗಾಗಿ ಕಛೇರಿಗೆ ಈ ಕುರಿತು ವರದಿ ಸಲ್ಲಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಜರುಗಿಸಲಾಗುದು ಎಂದು ಈ ಮೂಲಕ ತಿಳಿಸಲಾಗಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

13 hours ago