ಕಲಬುರ್ಗಿ: 09.ಜನವರಿ.25:- ರಾಜ್ಯದಲ್ಲಿ ಪ್ರತಿಒಂದು ವಿಶ್ವವಿದ್ಯಾಲಯಗಳಲ್ಲಿ ಪ್ರತೀಕ ವಿಭಾಗಗಳಲ್ಲಿ ಎಲ್ಲಾ ಬೋಧಕ, ಬೋಧಕೇತರ ಖಾಲಿಯಿರುವ ಹುದ್ದೆಗಳನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉನ್ನತ ಶಿಕ್ಷಣ ಪದ್ಧತಿ ಅವನತಿಯತ್ತ ಸಾಗುತ್ತಿದೆ ಎಂಬುವುದಕ್ಕೆ ಕೆಲವೊಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಉನ್ನತ ಶಿಕ್ಷಣದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿವೆ, ಖಾಲಿಯಾದ ಖಾಯಂ ಹುದ್ದೆಗಳ ಭರ್ತಿಗಾಗಿ ಈಗಾಗಲೇ ನಾನು ಸದನದಲ್ಲಿ ಪ್ರಶ್ನಿಸಿ ಸಚಿವರ ಗಮನ ಸೆಳೆದಿದ್ದೇನೆ. ಹಲವಾರು ಬಾರಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ, ಚರ್ಚಿಸಿರುವೆ ಇಲ್ಲಿಯವರೆಗೂ ಇದಕ್ಕೆ ಪರಿಹಾರ ಒದಗಿಸಲು ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಟ್ಟು 2723 ಬೋಧಕ ಹುದ್ದೆಗಳು ಖಾಲಿ ಇದ್ದು, ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4709 ಹುದ್ದೆಗಳು ಮಂಜೂರಾಗಿದ್ದರೆ, ಇದರಲ್ಲಿ 2723 ಹುದ್ದೆಗಳು ಖಾಲಿ ಉಳಿದಿವೆ. ಪ್ರಸ್ತುತ ಎಲ್ಲ ವಿವಿಗಳಲ್ಲಿ ಕಾಯಂ ಕಾರ್ಯನಿರ್ವಹಿಸುವವರಿಗಿಂತ ಖಾಲಿ ಹುದ್ದೆಗಳ ಹೆಚ್ಚಿವೆ. ಈ ಹಿಂದೆ ನೇಮಕಗೊಂಡವರೂ ಸಹ ನಿವೃತ್ತಿಯಾಗಿದ್ದು ಕೆಲವರು ಮಾತ್ರ ಉಳಿದಿದ್ದು, ಇವರೂ ಕೆಲದೇ ವರ್ಷಗಳಲ್ಲಿ ನಿವೃತ್ತಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
ರಾಜ್ಯದ 32 ವಿವಿಗಳಲ್ಲಿ ಬೋಧಕೇತರ ಹುದ್ದೆಗಳು 9317 ಮಂಜೂರಾಗಿದ್ದರೆ ಇದರಲ್ಲಿ 6328 ಹುದ್ದೆಗಳು ಖಾಲಿಯಿವೆ. ಇದರಿಂದ ವಿವಿಯಲ್ಲಿನ ವಿವಿಧ ಕೆಲಸಗಳನ್ನು ಮಾಡಲು ಸಿಬ್ಬಂದಿಯೇ ಇಲ್ಲ. ಹಲವು ಹುದ್ದೆಗಳನ್ನು ಒಬ್ಬರೇ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳು 371(ಜೆ) ನಿಯಮದಂತೆ ಭರ್ತಿ ಮಾಡಿ:
ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ವಿಧಿ 371(ಜೆ) ಜಾರಿಯಾಗಿ ದಶಕ ಕಳೆದಿವೆ. ಆ ವಿಶೇಷ ಸ್ಥಾನಮಾನ 371(ಜೆ) ಅನ್ವಯ ಕಲ್ಯಾಣ ಕರ್ನಾಟಕ ಭಾಗದ ಯಾವುದೇ ಖಾಲಿ ಹುದ್ದೆಗಳಿಗೆ ಹಣಕಾಸು ಇಲಾಖೆಯ ಅನುಮತಿ ಬೇಕಾಗಿಲ್ಲ, ಆದರೂ ಈ ನಿಯಮವನ್ನು ಸರ್ಕಾರ ಜಾರಿ ಮಾಡಿಲ್ಲ. ಖಾಲಿ ಹುದ್ದೆ ಭರ್ತಿ ಯಾವಾಗ ಎಂದಾಗ ಹಣಕಾಸು ಇಲಾಖೆಯ ಕಡೆ ತೋರಿಸುವುದು ವಾಡಿಕೆಯಾಗಿದೆ.
ಈಗಲಾದರೂ ವಿಶೇಷ ಸ್ಥಾನಮಾನ ಅನ್ವಯ ನಮ್ಮ ಭಾಗದ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…