Home » ಲೈವ್ ನ್ಯೂಸ್ » ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Facebook
X
WhatsApp
Telegram

ಬೆಂಗಳೂರು.08.ಜುಲೈ.26: ರಾಜ್ಯಾದ್ಯಂತ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಕಾಣುಬರುತ್ತಿದೆ.

ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ತಿಳಿಸಲಾಗಿದೆ ಇ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕ ರಾಜ್ಯಾದ್ಯಂತ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 8 ಮತ್ತು 9ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗಂಟೆಗೆ 60 ಕಿ.ಮೀ ವೇಗದ ಗಾಳಿಗೆ ಎಚ್ಚರಿಕೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಲಾಗಿದೆ.

ಇನ್ನು ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ

ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ನದಿಗಳು, ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಭಾರಿ ಗಾಳಿ ಮತ್ತು ಮಳೆಯ ಸಮಯದಲ್ಲಿ ಅಗತ್ಯವಿಲ್ಲದೆ ಹೊರಗೆ ತೆರಳದಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology