ಬೆಂಗಳೂರು.20.ಜೂನ್.25:- ಕರ್ನಾಟಕ ಪಬ್ಲಿಕ್ ಶಾಲೆ (KPS), ಬೆಂಗಳೂರು ಪಬ್ಲಿಕ್ ಶಾಲೆ (BPS) ‘ಹಾಗೂ ಪಿ.ಎಂ ಶ್ರೀ ಶಾಲೆಗಳಲ್ಲಿ ದಿ-ಭಾಷಾ ಮಾಧ್ಯಮದ (Bilingual Classes) ತರಗತಿಗಳಿಗೆ ಮಕ್ಕಳ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2017-18ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಹಂತ-ಹಂತವಾಗಿ 308 ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳನ್ನು ಪ್ರಾರಂಭಿಸಲಾಗಿದೆ. ಈ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (KPS) ಪೂರ್ವ ಪ್ರಾಥಮಿಕ (LKG & UKG) ತರಗತಿಗಳನ್ನು ಹಾಗೂ ಈಗಾಗಲೇ ನಡೆಯುತ್ತಿರುವ ಕನ್ನಡ / ಇತರ ಮಾಧ್ಯಮದ ತರಗತಿಗಳೊಂದಿಗೆ ಒಂದನೇ ತರಗತಿಯಿಂದ ದ್ವಿಭಾಷಾ ಮಾಧ್ಯಮ (Bilingual), ತರಗತಿಗಳನ್ನು ಸಹ ಪ್ರಾರಂಭಮಾಡಲಾಗಿದೆ.
ಮೇಲೆ ಓದಲಾದ ಕ್ರಮಾಂಕ (1) ರಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ವಿಧಿಸಿರುವ ಷರತ್ತುಗಳಂತೆ ಪೂರ್ವ ಪ್ರಾಥಮಿಕ ಒಂದು ವಿಭಾಗದಲ್ಲಿ 20 ರಿಂದ 30 ಮಕ್ಕಳನ್ನು ದಾಖಲಿಸತಕ್ಕದು. ಎಂದು ಆದೇಶಿಸಲಾಗಿದೆ
ជ ជជ ៩ (2) ” vi ‘Adequate number of teachers qualifies for each subject shall be provided with overall pupil to teacher (PTR) no exceeding 30 for Primary classes, 40 for secondary classes and 60 for higher secondary classes d ಪ್ರಕಾರ ಸದರಿ ಶಾಲೆಗಳಲ್ಲಿ ನಡೆಯುತ್ತಿರುವ ಪೂರ್ವ ಪ್ರಾಥಮಿಕ LKG & UKG ಹಾಗೂ ದ್ವಿ-ಭಾಷಾ ಮಾಧ್ಯಮದ ತರಗತಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯನ್ನು ಗರಿಷ್ಠ 30 ಕ್ಕೆ ಸೀಮಿತಗೊಳಿಸಿದೆ.
ಮೇಲೆ ಓದಲಾದ ಕ್ರಮಾಂಕ (3) ರಲ್ಲಿ ದ್ವಿ-ಭಾಷಾ(Bilingual) ತರಗತಿಗಳಲ್ಲಿ ವಿದ್ಯಾರ್ಥಿ ಶಿಕ್ಷಕರ ಅನುಪಾತ (PTR ) 30:1ಕ್ಕೆ ಅನುಗುಣವಾಗಿ ಪ್ರತಿ ತರಗತಿಗೆ 30 ವಿದ್ಯಾರ್ಥಿಗಳಂತೆ ದಾಖಲಾತಿ ಪ್ರಕ್ರಿಯೆ ನಡೆಸುವುದು, ದಾಖಲಾತಿಗೆ ಹೆಚ್ಚಿನ ಬೇಡಿಕೆ ಬಂದಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ದಾಖಲಾತಿ ನಡೆಸತಕ್ಕದು ಎಂದು ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (4) ರಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಈಗಾಗಲೇ ಪ್ರಾರಂಭಿಸಿರುವ ದ್ವಿ-ಭಾಷಾ ಮಾಧ್ಯಮದ ತರಗತಿಗಳ ಜೊತೆಯಲ್ಲಿ ದಾಖಲಾತಿ ಹೆಚ್ಚಳದಿಂದಾಗಿ ಒಟ್ಟು 42 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) & 51 ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳಲ್ಲಿ 1 ನೇ ತರಗತಿ ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಕ್ರೋಢಿಕರಿಸಿ ಸಂಪನ್ಮೂಲಗಳ ಗರಿಷ್ಠ ಬಳಕೆ ಮಾಡಿ ಹೆಚ್ಚಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ ಹಾಗೂ ಸಾಂವಿಧಾನಕ ಭಾದ್ಯತೆಯನ್ನು ಹೊಂದಿರುತ್ತದೆ. ಕೇಂದ್ರಿಯ ವಿದ್ಯಾಲಯ ಮತ್ತು ನಮೋದಯ ಶಾಲೆಗಳು ಈ ರೀತಿ ಹೆಚ್ಚಿನ ಮಕ್ಕಳ ದಾಖಲಾತಿಗೆ ಅವಕಾಶ ಕಲ್ಪಿಸಿ, ಯಶಸ್ಸು ಹೊಂದಿವೆ.
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ (Bilingual) ತರಗತಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾದ ಹಿನ್ನೆಲೆಯಲ್ಲಿ SDMC ಮತ್ತು ಪೋಷಕರ ಹಾಗೂ ಜನಪ್ರತಿನಿಧಿಗಳ ಬೇಡಿಕೆಯನುಸಾರ ಸದರಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಎಲ್.ಕೆ.ಜಿ & ಪ್ರಾಥಮಿಕ ತರಗತಿಗಳಲ್ಲಿ ಪ್ರಸ್ತುತ ಗರಿಷ್ಠ 30 ವಿದ್ಯಾರ್ಥಿಗಳ ದಾಖಲಾತಿಯ ಮಿತಿ ಇದ್ದು, ಇದನ್ನು ಹೆಚ್ಚಿಸಲು ಕೋರಿರುತ್ತಾರೆ. ಈ ಹಿನ್ನಲೆಯಲ್ಲಿ ಸದರಿ, ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿಯವರೆಗೆ, ತರಗತಿವಾರು ವಿದ್ಯಾರ್ಥಿಗಳ ದಾಖಲಾತಿ 50 ಕ್ಕೆ ಹೆಚ್ಚಳ ಮಾಡುವ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಂದ ಪ್ರಸ್ತಾವನೆ ಸ್ವೀಕತವಾಗಿರುತ್ತದೆ. ಪ್ರಸ್ತಾವನೆಯಲ್ಲಿನ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…