ಬೆಂಗಳೂರು. 17.ಜುಲೈ.25:- ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್, ಕಿಶೋರ್ ಕುಮಾರ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಎರಡು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…