Home » ಲೈವ್ ನ್ಯೂಸ್ » ರಾಜ್ಯಾದ್ಯಂತ ಕೆಪಿಎಸ್ ಕ್ರಾಂತಿ!

ರಾಜ್ಯಾದ್ಯಂತ ಕೆಪಿಎಸ್ ಕ್ರಾಂತಿ!

ಬೆಂಗಳೂರು.01.ಸೆಪ್ಟೆಂಬರ್.26:ರಾಜ್ಯದಾದ್ಯಂತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಒಂದು ಸಾವಿರ ಕೆಪಿಎಸ್‌ ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ₹2,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪೂರ್ವ ಪ್ರಾಥಮಿಕದಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒದಗಿಸುವುದು ಕೆಪಿಎಸ್‌ನ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು.

ಕೆಪಿಎಸ್ ಶಾಲೆಗಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಕೆಪಿಎಸ್ ಎಂದರೆ ಕೇವಲ ಹೊಸ ಕಟ್ಟಡವಲ್ಲ. ಗುಣಮಟ್ಟದ ಶಿಕ್ಷಣ, ಉತ್ತಮ ಮೂಲಸೌಕರ್ಯ, ಆಧುನಿಕ ಕಲಿಕಾ ವಾತಾವರಣ ಮತ್ತು ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸುವ ಸಮಗ್ರ ಪ್ರಯತ್ನವಾಗಿದೆ.

ಶಿಕ್ಷಕಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಇದನ್ನು ಅರಿತು, ಶಿಕ್ಷಕ ವೃಂದ ನಿರಂತರ ಬದಲಾವಣೆಗೆ ಹೊಂದಿಕೊಳ್ಳುತ್ತಿದ್ದಾರೆ. ಸರ್ಕಾರ ಜಾರಿಗೊಳಿಸುತ್ತಿರುವ ಸುಧಾರಣೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ, ಇವರೆಲ್ಲರನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology