ಬೆಂಗಳೂರು.24.ಜೂನ್.25:- ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅರಿವಿನ ಅಭಿಯಾನವನ್ನು ಕಾರ್ಯಕ್ರಮ
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ರಾಮನಗರ ತಾಲ್ಲೂಕು, ಬಿಡದಿ ಹೋಬಳಿ, ಬನ್ನಿಕುಪ್ಪೆ(ಬಿ)ಕ್ಲಸ್ಟರ್ನಲ್ಲಿ ಸಮೂಹ ಸಂಪನ್ಮೂಲ ಶಿಕ್ಷಕರಾದ (ಸಿ.ಆರ್.ಪಿ) ಶ್ರೀ ಚಿಕ್ಕವೀರಯ್ಯ ಟಿ.ಎನ್ ಹಾಗೂ ಇವರ ಶಿಕ್ಷಕರ ತಂಡದ ವತಿಯಿಂದ ದಿನಾಂಕ:14.02.2025 ರಿಂದ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಪ್ರಾರಂಭಿಸಿದ್ದು, ಈ ಅಭಿಯಾನವು ವಿದ್ಯಾರ್ಥಿಗಳು/ಪೋಷಕರು ಹಾಗೂ ಸಾರ್ವಜನಿಕರು ಮೊಬೈಲ್ ಬಳಸುವ ಪ್ರಮಾಣವನ್ನು ಕಡಿಮೆಗೊಳಿಸಿ, ಪುಸ್ತಕ ಓದುವ ಅಭಿರುಚಿಗೆ ಪೂರಕವಾಗಿ ಜನಪ್ರಿಯವಾಗುತ್ತಿದೆ.
ಸದರಿ ಅಭಿಯಾನವು ರಾಜ್ಯಾದ್ಯಂತ ಪ್ರಭಾವ ಬೀರಿ ಸದ್ದು ಮಾಡುತ್ತಿದ್ದು, ಬಹುತೇಕ ಎಲ್ಲಾ ದೃಶ್ಯ/ಮುದ್ರಣ ಮಾಧ್ಯಮ/ಆಕಾಶವಾಣಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿದೆ.
ಆದ್ದರಿಂದ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಇಡೀ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಆರಂಭದ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರ್ಥನಾ ಅವಧಿಯಲ್ಲಿ ಮತ್ತು ಪೋಷಕರು/ಸಾರ್ವಜನಿಕರಿಗೆ ಅನುಕೂಲಕರವಾದ ವೇಳೆಯಲ್ಲಿ ಈ ಅಭಿಯಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎಂಬ ವಿನೂತನ ಕಾರ್ಯಕ್ರಮದ ಬಗ್ಗೆ ಸರ್ಕಾರದಿಂದ ಸುತ್ತೋಲೆ ಹೊರಡಿಸಬೇಕೆಂದು ಮತ್ತು ಈ ಮುಖೇನ ಮೊಬೈಲ್ ಬಳಕೆಯಿಂದಾಗಬಹುದಾದ ದುಷ್ಪರಿಣಾಮ ಹಾಗೂ ಪುಸ್ತಕ ಓದುವುದರಿಂದ ವಿದ್ಯಾರ್ಥಿಗಳಿಂದ ಆಗುವ ಜ್ಞಾನವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಬೇಕೆಂದು ಕೋರಿರುತ್ತಾರೆ.
ಈ ಸಂಬಂಧ ಉಲ್ಲೇಖ(01) ಸರ್ಕಾರದ ಪತ್ರದಲ್ಲಿ ಲಗತ್ತಿಸಿರುವ ಪತ್ರದಂತೆ, ತಮ್ಮ ಕಾಲೇಜು/ವಿಭಾಗಗಳಲ್ಲಿ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮವಹಿಸುವಂತೆ ಈ ಮೂಲಕ ತಿಳಿಸಲಾಗಿದೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…