ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಬಿಪಿಎಲ್ ಕಾರ್ಡ್‍ನಲ್ಲಿದ್ದ ಫಲಾನುಭವಿಗಳನ್ನು ಎಪಿಎಲ್‍ಗೆ ವರ್ಗಾವಣೆ ಮಾಡಲು ಇಲಾಖೆ ಮುಂದಾದಾಗ ದೊಡ್ಡ ವಿವಾದವೇ ಸೃಷ್ಟಿಯಾಯಿತು. ಸದನದ ಸದಸ್ಯರೆಲ್ಲರೂ ಒಪ್ಪಿಗೆಯನ್ನು ಸೂಚಿಸಿದರೆ ಬಿಪಿಎಲ್‍ನಿಂದ ಎಪಿಎಲ್‍ಗೆ ಅನರ್ಹ ಫಲಾನುಭವಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದರು.
ಅನರ್ಹ ಬಿಪಿಎಲ್ ಕಾರ್ಡುದಾರರು ಆಹಾರಧಾನ್ಯಗಳನ್ನು ಪಡೆಯುತ್ತಿರುವ ಪರಿಣಾಮ ಸರಕಾರದ ಬೊಕ್ಕಸಕ್ಕೂ ಹೊರೆಯಾಗುತ್ತದೆ. ಇದನ್ನು ಮಾಡುವಾಗ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಕೆಲವರು ಅರ್ಹ ಫಲಾನುಭವಿಗಳನ್ನೇ ತೆಗೆದು ಹಾಕುತ್ತಾರೆ ಎಂದು ಅಪಪ್ರಚಾರ ನಡೆಸುತ್ತಾರೆ. ಇದಕ್ಕೆ ಸದಸ್ಯರು ಅವಕಾಶ ಮಾಡಿಕೊಡಬಾರದು. ಸದನದ ಸದಸ್ಯರು ಒಪ್ಪಿಗೆ ಇದ್ದರೆ ಅನರ್ಹರನ್ನು ತೆಗೆದು ಹಾಕಲು ಸರಕಾರ ಸಿದ್ಧವಿದೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.
ಓರ್ವ ಬಿಪಿಎಲ್ ಫಲಾನುಭವಿ ಎಂದು ಗುರುತಿಸಬೇಕಾದರೆ ಕೇಂದ್ರ ಸರಕಾರ 11 ಹಾಗೂ ರಾಜ್ಯ ಸರಕಾರ 5 ಮಾನದಂಡಗಳನ್ನು ನಿಗದಿಪಡಿಸಿದೆ. ಈ ಮಾನದಂಡವನ್ನು ನಾವು ಪಾಲನೆ ಮಾಡಿದರೆ ಬಿಪಿಎಲ್ ಫಲಾನುಭವಿಗಳ ಸಂಖ್ಯೆ ಶೇ.35ಕ್ಕೆ ಇಳಿಕೆಯಾಗುತ್ತದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.
ರಾಜ್ಯದಲ್ಲಿ ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಮೇಲೆ ಇಲಾಖೆ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದೆ. 2023-24ರಲ್ಲಿ 404 ಪ್ರಕರಣಗಳು – 20 ಕೋಟಿ ರೂ. ದಂಡ, 2024-25ರಲ್ಲಿ 505 ಪ್ರಕರಣಗಳು – 10 ಕೋಟಿ ರೂ. ದಂಡ, ಪ್ರಸಕ್ತ ವರ್ಷ 287 ಪ್ರಕರಣಗಳು – 4 ಕೋಟಿ ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಕೆ.ಎಚ್.ಮುನಿಯಪ್ಪ ವಿವರಿಸಿದರು.
ರಾಜ್ಯದಲ್ಲೇ ಹೆಚ್ಚು ಬಿಪಿಎಲ್ ಫಲಾನುಭವಿಗಳು: ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತೀ ಹೆಚ್ಚು ಬಿಪಿಎಲ್ ಫಲಾನುಭವಿಗಳಿದ್ದಾರೆ. ತಮಿಳುನಾಡು ಶೇ.50, ಕೇರಳ ಶೇ.45, ತೆಲಂಗಾಣ ಶೇ.50, ಆಂಧ್ರಪ್ರದೇಶ ಶೇ.50, ನಮಲ್ಲಿ ಮಾತ್ರ ಶೇ.70 ರಿಂದ 75 ರಷ್ಟು ಬಿಪಿಎಲ್ ಫಲಾನುಭವಿಗಳು ಇದ್ದಾರೆ ಎಂದು ಕೆ.ಎಚ್.ಮುನಿಯಪ್ಪ ವಿವರಿಸಿದರು.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…