ರಾಜ್ಯಾದ್ಯಂತ 43 ಸಾವಿರ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ. ಸರ್ಕಾರಕೆ ಚಳಿ.!

ಬೆಂಗಳೂರು,08.ಜನೆವರಿ.25. ಬೆಂಗಳೂರು ಫ್ರೀಡಂ ಪಾರ್ಕಿ ನಲ್ಲಿ ಇಡೀ ರಜ್ಯದ 43 ಸಾವಿರ ಆಶಾ ಕಾರ್ಯಕರ್ತರು ಅವರ್ ಹಕ್ಕು ಸಾಲ್ವಾಗಿ ಹೋರಾಟಕ್ಕೆ ಚಾಲನೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಆರಂಭಿಸಿದ್ದು, ಅವುಗಳಲ್ಲಿ ಸಂಬಳ ಹೆಚ್ಚಳ ಕೂಡ ಒಂದಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಸ್ವಯಂ ಸೇವಕರ ಸ್ಥಾನಮಾನ ಮಾತ್ರ ನೀಡಲಾಗಿದ್ದು, ಲಸಿಕೆ ವಿತರಣೆ, ಮಗು ಮತ್ತು ತಾಯಂದಿರ ಆರೈಕೆ, ನೈರ್ಮಲ್ಯ, ರೋಗ ನಿಯಂತ್ರಣ ಸೇರಿದಂತೆ ಸರ್ಕಾರದ ಹಲವಾರು ಅಭಿಯಾನದ ಅನುಷ್ಠಾನಗಳಲ್ಲಿ ಮಹತ್ವದ ಪಾತ್ರಗಳನ್ನು ವಹಿಸಿದ್ದಾರೆ.

ಇವರ ಹೋರಾಟದ ಬೇಡಿಕೆಗಳಾಗಿ ಸಂಬಳ ಹೆಚ್ಚಳ, ತಮ್ಮ ಕೆಲಸಕ್ಕೆ ಸೂಕ್ತ ಮಾನ್ಯತೆ ಸಿಗುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಪ್ರಾರಂಭಿಸಿದ್ದಾರೆ.

ಆಶಾ ಕಾರ್ಯಕರ್ತ ಬೇಡಿಕೆಗಳೇನು?

👉 ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ಗೌರವಧನವನ್ನು ಮಾಸಿಕ ರೂ.20 ಸಾವಿರಕ್ಕೆ ಹೆಚ್ಚಿಸಬೇಕು.

👉 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

👉 ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು.

👉 ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು

👉 ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಆರೋಗ್ಯ ಇಲಾಖೆ ಹೇಳುವುದೇನು?

👉ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.

👉 ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.

👉 ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ.

👉 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯ ಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ.

*👉ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

👉ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ.

👉 ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.

👉 ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ.

👉 ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದ 43 ಸಾವಿರ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ…..

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

5 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

9 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

11 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

11 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

11 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

11 hours ago