|

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ,.25ಡಿಸೆಂಬರ್.25:- ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಡಿಸೆಂಬರ್.29 ಮತ್ತು 30 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರು ಡಿಸೆಂಬರ್.29 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಾಗಾರದ ಸಿದ್ಧತೆ ಬಗ್ಗೆ ಸ್ಥಳ ವೀಕ್ಷಣೆ ಮತ್ತು ಚರ್ಚೆ ನಡೆಸಲಿದ್ದಾರೆ. ನಂತರ ಬೀದರ ಸರ್ಕಾರಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.


ಡಿಸೆಂಬರ್.30 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಬಿದರನಿಂದ ನಿರ್ಗಮಿಸಲಿದ್ದಾರೆಂದು ಸರ್ಕಾರದ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *