09/06/2025 4:11 PM

Translate Language

Home » ರಾಜ್ಯ » ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ರಾಜ್ಯ ಗ್ಯಾರಂಟಿ ಯೋಜನೆಗಳ  ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

Facebook
X
WhatsApp
Telegram

ಬೀದರ, ನವೆಂಬರ್.19 (ಕರ್ನಾಟಕ ವಾರ್ತೆ):- ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್ ಅವರು ನವೆಂಬರ್.20 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
 ಅವರು ನವೆಂಬರ್ 20 ರಂದು ಬೆಳಿಗ್ಗೆ 11.30 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ 2ನೇ ಕೆ.ಡಿ.ಪಿ. ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 4 ಗಂಟೆಗೆ ಬೀದರ ಬಾಲ ಭವನದಲ್ಲಿ ಹಮ್ಮಿಕೊಂಡಿರುವ ಅಂಗನವಾಡಿ ಶಿಕ್ಷಕಿಯರು ಹಾಗೂ ಕಾರ್ಯಕರ್ತೆಯವರೊಂದಿಗೆ ಪಂಚ ಗ್ಯಾರಂಟಿ ಯೊಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಬೀದರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡಿರುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹಾಗೂ ಎನ್.ಎಸ್.ಯು.ಯ. ಪದಾಧಿಕಾರಿಗಳು ಹಾಗೂ ಸದಸ್ಯರುಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಬೀದರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡಿರುವ ಬೀದರ ಹಾಗೂ ಚಿಟಗುಪ್ಪ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!