|

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

ಬೀದರ.18.ಅಗಸ್ಟ್.25:- ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದಿನಾಂಕ: 01-10-2025 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಗೆ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅರ್ಹರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಲೂರ ಬೀದರ ಈ ಕಛೇರಿಯಿಂದ ಪಡೆದು, ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ದಿನಾಂಕ: 28-08-2025 ರೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿ, ಮೈಲೂರ ಬೀದರ ದೂರವಾಣಿ ಸಂಖ್ಯೆ: 08482-234647, 9513081723 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *