|

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.23.ಅಗಸ್ಟ್.25:- ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಸಹ “ವಿಶ್ವ ವಿಕಲಚೇತನರ ದಿನಾಚರಣೆ” ಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಡಿಸೆಂಬರ್.03 ರಂದು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ರಾಜ್ಯ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ಯಾರು ಅತ್ಯುತ್ತಮ ಸಾಧನೆ ಮಾಡಿರುತ್ತಾರೊ ಅವರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಮೈಲೂರ ಬೀದರ ಈ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಸಿದ್ದಪಡಿಸಿ ದಿನಾಂಕ: 15-10-2025 ರೊಳoಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08482-234647 ನ್ನು ಸಂಪರ್ಕಿಸಲು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *