ಬೆಂಗಳೂರು.23.ಜುಲೈ.25:-ಅಕ್ಟೋಬರ್ 01 ರಂದು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿದ್ದು ಸೇವೆಸಲ್ಲಿಸುತ್ತಿರುವ ಹಿರಿಯ ನಾಗರಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಇಲಾಖೆ ಸಿದ್ಧತೆ.
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸಲ್ಲಿಸಿರುವ ಅಥವಾ ಸೇವೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಂದ ನಿಗದಿತ 1 ಮತ್ತು 2ರ ನಮೂನೆಯ ಅರ್ಜಿಯ ಎಲ್ಲಾ ಕಲಂಗಳನ್ನು ಕನ್ನಡಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 25 ರೊಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬೇಕು.
ಮಾಹಿತಿಗಾಗಿ ವೆಬ್‍ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು http://www.dwdsc.karnataka.gov.inು.
ಹೆಚ್ಚಿನ ಮಾಹಿತಿಗಾಗಿ ದೂ.08392-267886 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.