ಬೆಂಗಳೂರು.18.ಫೆ.25:- ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಅತಿಥಿ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನ ಬೆಂಗಳೂರುನಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಜಿಲ್ಲೆಗಳಿಂದ ಬಂದಿದ್ದ ಅತಿಥಿ ಶಿಕ್ಷಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ಮಾಡಿ ಆಹವಾಲು ಆಲಿಸಿದರು.ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ’ ಎಂದು ಹೇಳಿದರು.
ವಿಶ್ವವಿದ್ಯಾಲಯಗಳಿಗೆ ₹400 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಕ್ಕಾಗಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ಹೊಸ ವಿಶ್ವವಿದ್ಯಾಲಯಗಳನ್ನೇ ಮುಚ್ಚಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು ಎಂದು ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡುವ ನಿಮ್ಮ ವೇತನ ಹೆಚ್ಚಳದ ಬೇಡಿಕೆ ಸರಿ ಇದೆ. ನಿಮ್ಮ ಬೇಡಿಕೆಗಳಿಗೆ ಸಹಮತ ಇದೆ’ ಎಂದು ತಿಳಿಸಿದರು.
‘ಬೇಡಿಕೆ ಈಡೇರಿಸುವಂತೆ ಕೋರಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ. ಸದನದಲ್ಲೂ ಪ್ರಸ್ತಾಪಿಸಿ ಹೋರಾಟ ಮಾಡುತ್ತೇವೆ’ ಎಂದು ಭರವಸೆ ನೀಡಿದರು
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…