ಬೀದರ.29.ಮಾರ್ಚ.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಮಾರ್ಚ.29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಮಾರ್ಚ.29 ರಂದು ಮಧ್ಯಾಹ್ನ 12 ಗಂಟೆಗೆ ಬೀದರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ 1.30 ಕ್ಕೆ ಔರಾದ್ ಪಟ್ಟಣದಲ್ಲಿರುವ ಎಂ.ಎಸ್.ಗೋಪಾತೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಔರಾದ ತಹಸೀಲ್ದಾರರ ಕಛೇರಿಯಲ್ಲಿ (ತಹಸೀಲ್ದಾರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಔರಾದ ವೃತ್ತ ನಿರೀಕ್ಷಕರು ಮತ್ತು ಮಕ್ಕಳ ಸಹಾಯವಾಣಿ) ಸಭೆ ನಡೆಸುವರು. ನಂತರ ಮಧ್ಯಾಹ್ನ 2.30ಕ್ಕೆ ಕಮಲನಗರ ತಾಲ್ಲೂಕಿನ ಢಿಕ್ಕಿ ಗ್ರಾಮಕ್ಕೆ ಭೇಟಿ (ಬಾಲಕಿ ಆತ್ಮಹತ್ಯೆ ಪ್ರಕರಣ) ನೀಡಲಿದ್ದಾರೆಂದು ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.