ಬೀದರ.18.ಮಾರ್ಚ.25:- 2021 ರಲ್ಲಿ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಕನ್ನಡ, ಆಂಗ್ಲ, ಹಿಂದಿ ಮತ್ತು ಭಾರತೀಯ ಇತರೆ ಭಾಷಾ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಿದ್ದು, ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು,
ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಜಾಲತಾಣ dpl.karnataka.gov.in ರಲ್ಲಿ ದಿನಾಂಕ: 15-03-2025 ರಂದು ಪ್ರಕಟಿಸಲಾಗಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ (ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಸರಬರಾಜುದಾರರು ಸಲ್ಲಿಸಿದ ಪುಸ್ತಕಗಳ ಹೆಸರು, ಪ್ರಕಾಶಕರ ಹೆಸರು, ಸರಬರಾಜುದಾರರ ಹೆಸರು, ಲೇಖಕರ ಹೆಸರು, ಪುಟ ಸಂಖ್ಯೆ, ಮುಖ ಬೆಲೆ, ನಿಗದಿತ ಬೆಲೆ, ಪುಸ್ತಕದ ಅಳತೆ, ಹಾಗೂ ಇತರೆ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ದಿನಾಂಕ:18-03-2025 ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀದಿ ಬೆಂಗಳೂರ-560001.
ಇಲ್ಲಿಗೆ ಲಿಖಿತವಾಗಿ ಅಥವಾ ಇ-ಮೇಲ್ dpl_dir_acts@yahoo.co.in ಮೂಲಕ ಮನವಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.